spot_img
Tuesday, March 17, 2026
spot_img

ಕೋಟೇಶ್ವರ ವಿದ್ಯುತ್ ಚಿತಾಗಾರದ ಮಾಹಿತಿ ವಿಸ್ತರಿಸಬೇಕು-ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತಿನ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ತಾಲೂಕು ಪಂಚಾಯತ್ ಕುಂದಾಪುರ ಗ್ರಾಮ ಪಂಚಾಯತ್ ಕೋಟೇಶ್ವರ ಇವರ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಹಿಂದೂ ರುದ್ರಭೂಮಿಯನ್ನು ಆಧುನಿಕ ಮಾದರಿಯಲ್ಲಿ ನಿರ್ಮಿಸಲಾದ ಸುಮಾರು ಒಂದು ಕೋಟಿ ರೂ. ಅಂದಾಜು ವೆಚ್ಚದ ವಿದ್ಯುತ್ ಚಿತಾಗಾರದ ನಿರ್ವಹಣೆಯ ಕುರಿತು ಕುಂದಾಪುರ ತಾಲೂಕು ಪಂಚಾಯಿತಿನ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು, ವಿದ್ಯುತ್ ಚಿತಾಗಾರದ ಮಾಹಿತಿ ಮತ್ತಷ್ಟು ಗ್ರಾಮೀಣ ಮಟ್ಟದಲ್ಲಿ ವಿಸ್ತರಿಸಬೇಕು. ಶೀಘ್ರದಲ್ಲಿ ಇನ್ನೊಂದು ಸುತ್ತಿನ ಸಭೆ ನಡೆಸಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರುಗಳು, ವ್ಯವಸಾಯ ಸೇವಾ ಸಹಕಾರಿ ಸಂಘಗಳು, ಬೇರೆ ಬೇರೆ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಸಿ ಇದರ ಸಾಧಕ ಬಾಧಕಗಳ ವಿಚಾರ ಬಗ್ಗೆ ಸಮಾಲೋಚಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಧಾನಪರಿಷತ್ತಿನ ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಬಹಳ ಮುಖ್ಯವಾಗಿ ಕುಂದಾಪುರ, ಬೈಂದೂರು ಬ್ರಹ್ಮಾವರ ತಾಲೂಕಿನ ಜನರ ಅನುಕೂಲಕ್ಕಾಗಿ ವಿದ್ಯುತ್ ಚಿತಾಗಾರವನ್ನು ಪ್ರಾರಂಭಿಸಲಾಗಿದ್ದು, ಇದರ ವ್ಯಾಪ್ತಿ ಹಾಗೂ ಪ್ರಚಾರವನ್ನು ಮತ್ತಷ್ಟು ಮಾಹಿತಿ ನೀಡಬೇಕು. ಅತಿ ಮುಖ್ಯವಾಗಿ ಇದರ ನಿರ್ವಹಣೆಯ ಗಂಭೀರವಾಗಿ ಯೋಚಿಸಬೇಕು ಎಂದರು.

ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ಡಾ. ರವಿಕುಮಾರ ಹುಕ್ಕೇರಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕೋಟೇಶ್ವರ, ತೆಕ್ಕಟ್ಟೆ, ಗೋಪಾಡಿ, ಬೀಜಾಡಿ, ಕೋಣಿ ಗ್ರಾಮ ಪಂಚಾಯಿತಿನ ಪಿಡಿ‌ಒ ಹಾಗೂ ಅಧ್ಯಕ್ಷರು, ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!