spot_img
Tuesday, March 17, 2026
spot_img

ಬ್ರಹ್ಮಾವರ: ಜಿ ಎಮ್‌ನಲ್ಲಿ ವಿಶ್ವಪರಿಸರ ದಿನಾಚರಣೆ

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪರಿಸರವಾದಿ ಸುನಿಲ್ ಸಾಲಿಯಾನ್‌ರವರು ಆಗಮಿಸಿದ್ದರು. ಅವರು ಪ್ಲಾಸ್ಟಿಕ್‌ನ ಇತಿಹಾಸ ಮತ್ತು ಅತಿಯಾದ ಬಳಕೆ ಅದರ ಪರಿಣಾಮಗಳ ಕುರಿತು ಮಾಹಿತಿಯನ್ನು ನೀಡಿ ಮಾತನಾಡಿ ಕಳೆದ ಇಪ್ಪತ್ತು ವರ್ಷಗಳಿಂದ ಈಚೆಗೆ ಪ್ಲಾಸ್ಟಿಕ್ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ದಿನನಿತ್ಯದ ಜೀವನ ಕ್ರಮದಲ್ಲಿ ಪ್ಲಾಸ್ಟಿಕ್ ರಹಿತ ವಸ್ತುಗಳನ್ನು ಬಳಸಬೇಕೆಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಪ್ರತಿದಿನವೂ ಪರಿಸರ ದಿನವಾಗಿರಬೇಕು. ಸ್ವಚ್ಛತೆಯನ್ನು ನಾವು ಪಾಲಿಸಿ ಇತರರಿಗೆ ಮಾಹಿತಿಯನ್ನು ನೀಡಬೇಕು. ಗಿಡವನ್ನು ನೆಟ್ಟು ಆರೈಕೆ ಮಾಡಿ ಅವುಗಳು ಬೆಳೆದಾಗ ಮಕ್ಕಳನ್ನು ಪೋಷಿಸಿದ ಹಾಗೆ ಸಂತೃಪ್ತಿ ದೊರೆಯುತ್ತದೆ ಎಂದರು.

ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಎಲ್ಲರಿಂದಲೂ ಪ್ಲಾಸ್ಟಿಕ್ ಮುಕ್ತ ಪರಿಸರದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ನಾವು ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದರಲ್ಲಿ ಗೆಲುವನ್ನು ಸಾಧಿಸಬೇಕು. ಹಾಗೆಯೇ ಸ್ವಚ್ಛ, ಹಸಿರು ಪ್ರಕೃತಿಯನ್ನು ನಿರ್ಮಾಣ ಮಾಡಬೇಕೆಂದರು. ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ಪೇಪರ್ ಬ್ಯಾಗನ್ನು ಸ್ಥಳೀಯ ಅಂಗಡಿಗಳಿಗೆ ವಿತರಿಸಿದರು. ಶಾಲಾ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!