spot_img
Tuesday, March 17, 2026
spot_img

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು: ವಿಶ್ವ ಪರಿಸರ ದಿನಾಚರಣೆ

ಕುಂದಾಪುರ: ಬೈಂದೂರು ವಲಯದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ ನಿಸರ್ಗ ಇಕೋ ಕ್ಲಬ್ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಿವೃತ್ತ ಐ.ಎಫ್.ಎಸ್ ಅಧಿಕಾರಿ ನಾಗೇಶ್ ಪ್ರಭು ಮತ್ತು ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಬಿ.ಎನ್ ಶೆಟ್ಟಿಯವರು ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಅರಣ್ಯ ಇಲಾಖೆಯ ತಾಯಿಯ ಹೆಸರಿನಲ್ಲೊಂದು ಗಿಡ’ ಈ ಕಾರ್ಯಕ್ರಮದ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ವಿತರಿಸಲಾಯಿತು. ಶ್ರೀಮತಿ ಮತ್ತು ಅರ್ಚನ ಭರತ್ ಶೆಟ್ಟಿ ಇವರಿಂದ ಕೊಡಲ್ಪಟ್ಟ ಉಚಿತ ನೋಟ್ ಪಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ ಪ್ರಾಂಶುಪಾಲರಾದ ಕೃಷ್ಣರಾಜ ಭಟ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಎಸ್‌ಡಿ‌ಎಂಸಿ ಸದಸ್ಯ ರಾಘವೇಂದ್ರ ನೆಂಪು, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ನಾರಾಯಣ ಶೆಟ್ಟಿ, ಅರಣ್ಯ ಅಧಿಕಾರಿ ಸುನೀಲ್ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಸ್ಥರಾದ ಕುಪ್ಪಯ್ಯ ಮರಾಠಿ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ಶ್ರೀಧರ್ ಭಟ್ ಸ್ವಾಗತಿಸಿದರು. ಗಣಿತ ಶಿಕ್ಷಕ ಸೀತಾರಾಮ ಮೊಗವೀರ ವಂದಿಸಿದರು. ಕನ್ನಡ ಶಿಕ್ಷಕ ರವಿರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!