spot_img
Tuesday, March 17, 2026
spot_img

ಸ.ಹಿ.ಪ್ರಾ.ಶಾಲೆ ಕರ್ಕುಂಜೆ: ಪೂರ್ವಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ ಇಲ್ಲಿ 2025-26ನೇ ಸಾಲಿನ ಎಲ್.ಕೆ.ಜಿ., ಯು.ಕೆ.ಜಿ ತರಗತಿಗಳ ಪ್ರಾರಂಭೋತ್ಸವ ನಡೆಯಿತು.

ಬೈಂದೂರು ವಲಯದ ಕ್ಷೇತ್ರಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಮಕ್ಕಳಿಗೆ ಸ್ಮೈಲಿಂಗ್ ಪೆನ್ಸಿಲ್ ಕೊಟ್ಟು ಬರಮಾಡಿಕೊಂಡರು. ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹಂದಕುಂದ ಅಶೋಕ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಕೋರಿದರು.
ಕರ್ಕುಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಬಾಂಡ್ಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ವತಿಯಿಂದ ಪಠ್ಯಪುಸ್ತಕಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಶೇಖರ ಆಚಾರ್, ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಅಶೋಕ್ ಶೆಟ್ಟಿ ಜಾಡ್ಕಟ್ಟು, ಹಿರಿಯರಾದ ನಾರಾಯಣ ನಾಯಕ್, ಶ್ರೀಕೃಷ್ಣ ಪೈಪ್ ಇಂಡಸ್ಟ್ರೀಸ್ ಮಾಲಕರಾದ ರಾಜೇಶ್ ನಾಯಕ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಾಗರತ್ನ, ಸಾಧು ಪೂಜಾರ್ತಿ, ನಸೀಮಾ, ಹಳೇವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಕರ್ಕುಂಜೆ ಕ್ಲುಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ, ಶಾಲಾ ಮುಖ್ಯಶಿಕ್ಷಕ ಚಂದ್ರ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರು, ಹಳೇವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಎಲ್.ಕೆ.ಜಿ., ಯು.ಕೆ.ಜಿ ಶಿಕ್ಷಕಿಯರು, ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಂಪ್ರಾದಾಯಿಕವಾಗಿ ಆರತಿಯನ್ನು ಎತ್ತಿ ಸ್ವಾಗತಿಸಿಕೊಳ್ಳಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!