spot_img
Thursday, March 19, 2026
spot_img

ಕ.ರಾ.ರ.ಸಾ.ನಿಗಮದ ವಿದ್ಯಾರ್ಥಿ ಬಸ್ ಪಾಸ್ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices. ನಲ್ಲಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕ.ರಾ.ರ.ಸಾ.ನಿಗಮದ ವೆಬ್‍ಸೈಟ್  https://ksrtc.karnataka.gov.in/studentpass ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ ಅಥವಾ ಕಾಲೇಜು ಮುಖೋಪಾಧ್ಯಾಯರ ಅಥವಾ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‍ಲೋಡ್ ಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.

ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ.
ಕ.ರಾ.ರ.ಸಾ.ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್  https://ksrtc.karnataka.gov.in/studentpass ನಲ್ಲಿ ಪ್ರಕಟಿಸಲಾಗಿದೆ ಎಂದು ಮಂಗಳೂರು ಕ.ರಾ.ರ.ಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!