spot_img
Tuesday, March 17, 2026
spot_img

ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ಶಿಲಾದೇಗುಲ ಲೋಕಾರ್ಪಣೆ

ಹಾಲಾಡಿ: ಹಾಲಾಡಿ ಗ್ರಾಮದ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ ಮತ್ತು ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವ ವಿದ್ವಾನ್ ವಾಸುದೇವ ಜೋಯಿಸರ ನೇತೃತ್ವದಲ್ಲಿ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತಾನಾಡಿದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಜ್ಯೋತಿಷ್ಯ ವಿದ್ವಾನ್ ವಾಸುದೇವ ಜೋಯಿಸರು ಪ್ರತಿ ಗ್ರಾಮದಲ್ಲಿರುವ ದೇವಸ್ಥಾನಗಳು ಜೀರ್ಣೋದ್ದಾರವಾದಾಗ ಮಾತ್ರ ಆ ಗ್ರಾಮದ ಉದ್ದಾರ ಸಾಧ್ಯ. ಮುನಿಯ ಹೆಸರಿನಲ್ಲಿಯೇ ಇರುವ ಅಪರೂಪದ ಈ ಜಮದಗ್ನಿಯ ಕ್ಷೇತ್ರದಲ್ಲಿ ನೆಲೆಯಾದ ಮಹಾದೇವನಿಗೆ ವಿಶೇಷವಾದ ಪೌರಾಣಿಕ ಹಿನ್ನೆಲೆಯಿದೆ. ಈ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ದುಡಿದ ಎಲ್ಲರಿಗೂ ಹಾಗೂ ಭಕ್ತರಿಗೆ ಮಹಾದೇವ ಒಳಿತನ್ನುಂಟುಮಾಡಲಿ ಎಂದರು.

ಸಭೆಯಲ್ಲಿ ದೇವಸ್ಥಾನದ ಅರ್ಚಕರಾದ ಭಾಸ್ಕರ ಅಡಿಗ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಿ.ಅಶೋಕ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಅನುರಾಧ ಪಿ ಶೆಟ್ಟಿ, ಹಾಲಾಡಿ ಮಾರಿಕಾನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹಾಲಾಡಿ ಸರ್ವೋತ್ತಮ ಹೆಗ್ಡೆ, ಉದ್ಯಮಿಗಳಾದ ಚಿಟ್ಟೆಬೈಲು ಜಗನ್ನಾಥ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಗೈನಾಡಿ, ಮಂಜುನಾಥ ರಾವ್ ಹಾಲಾಡಿ, ಗ್ರಾ.ಪಂ ಸದಸ್ಯರಾದ ಜನಾರ್ಧನ ಹಾಲಾಡಿ, ಗುರುಪ್ರಸಾದ ಶೆಟ್ಟಿ, ರಾಜಗೋಪಾಲ ಅಡಿಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ನಾರಾಯಣ ಪಾಲನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇಗುಲದ ಅಭಿವೃದ್ಧಿಗೆ ಸಹಕರಿಸಿದ ದಾನಿಗಳು ಮತ್ತು ಅವಿರತವಾಗಿ ಶ್ರಮಿಸಿದವರನ್ನು ಗುರುತಿಸಿ ಗೌರವಿಸಲಾಯಿತು.
ಸೂರ್ಯಪ್ರಕಾಶ ದಾಮ್ಲೆ ಸ್ವಾಗತಿಸಿದರು. ವಿವೇಕ ಮಿತ್ಯಾಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ ಹಾಲಾಡಿ ಮತ್ತು ಸಂತೋಷ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಶಾ ಕುಲಾಲ್ ಹಾಲಾಡಿ ಅಭಿನಂದನಾ ಪತ್ರವನ್ನು ವಾಚಿಸಿದರು. ಜ್ಞಾನೇಶ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!