spot_img
Tuesday, March 17, 2026
spot_img

ಹೆಸಕುತ್ತೂರು: ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: “ಕನ್ನಡ ಮಾಧ್ಯಮ ಸರಕಾರಿ ಶಾಲೆಗಳು ಯಾವುದೇ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗಿಂತ ಕಡಿಮೆ ಇಲ್ಲ. ಅತ್ಯುತ್ತಮ ಬೋಧನಾ ಕ್ಷಮತೆಯುಳ್ಳ ಶಿಕ್ಷಕರು ಸರಕಾರಿ ಶಾಲೆಗಳಲ್ಲಿದ್ದಾರೆ” ಎಂದು ಗೀತಾನಂದ ಫೌಂಡೇಶನ್ (ರಿ ) ಮಣೂರು ಪಡುಕರೆ ಇದರ ಪ್ರವರ್ತಕರಾದ ಆನಂದ ಸಿ ಕುಂದರ್ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ಉಚಿತವಾಗಿ ನೀಡಲಾದ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡುತ್ತಿದ್ದರು.

ಹೆಸಕುತ್ತೂರು ಪ್ರಾಥಮಿಕ ಶಾಲೆಗೆ ನೋಟ್ ಪುಸ್ತಕದ ಜೊತೆಗೆ ಕಂಪ್ಯೂಟರ್ಗಳು, ವಾಚನಾಲಯದ ಕಪಾಟುಗಳು ಮತ್ತಿತರ ಕೊಡುಗೆಯನ್ನೂ ಶ್ರೀಯುತರು ಶಾಲೆಗೆ ಈ ಹಿಂದೆ ನೀಡಿರುವುದಕ್ಕೆ ಕ್ರತಜ್ಞತಾಪೂರ್ವಕವಾಗಿ ಶಾಲಾ ಪರವಾಗಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಯ ನಿರ್ಗಮನ ಅಧ್ಯಕ್ಷರಾದ ಕೃಷ್ಣ ಕೆದ್ಲಾಯರನ್ನು ಸನ್ಮಾನಿಸಲಾಯಿತು. ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ಕಪಾಟನ್ನು ಸ್ವೀಕರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೃಷ್ಣ ಕೆದ್ಲಾಯ ವಹಿಸಿದ್ದರು. ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಆಶಾ ಕುಲಾಲ, ಎಸ್ ಡಿ ಎಂ ಸಿ ಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸುಧಾಕರ ಕುಲಾಲ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ವಿಜಯಾ ಆರ್, ರವೀಂದ್ರ ನಾಯಕ್, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರಾ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಹಾಗೂ ವಿಜಯ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!