spot_img
Monday, March 16, 2026
spot_img

ಜೂನ್ 16ರವರೆಗೆ ಭಾರಿ ಮಳೆ | ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಚಂಡಮಾರುತ ಪರಿಚಲನೆ ಮುಂದುವರಿದಿದ್ದು, ಪರಿಣಾಮ ಕರ್ನಾಟಕದಾದ್ಯಂತ ಮುಂದಿನ 05 ದಿನಗಳ ಕಾಲ ಸಾಧಾರಣದಿಂದ ಭಾರೀ ಮತ್ತು ಅತೀ ಭಾರೀ ಮಳೆ ಆಗುವ ನಿರೀಕ್ಷೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕದ ವಿಜ್ಞಾನಿ ಹಾಗೂ ಹವಾಮಾನ ತಜ್ಞ ಡಾ.ಸಿ.ಎಸ್. ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.

ಸಮುದ್ರ ಭಾಗದಲ್ಲಿ ವೈಪರೀತ್ಯ ಗಾಳಿಯ ಎತ್ತರ 3.5 ರಿಂದ 4.5 ಕಿಲೋ ಮೀಟರ್ ಎತ್ತರದಲ್ಲಿದೆ. ಇದರ ಪ್ರಭಾವದಿಂದಾಗಿ ರಾಜ್ಯದ ಮಲೆನಾಡು, ಒಳನಾಡು ಭಾಗಗಳಲ್ಲಿ ಭಾರಿ ಮಳೆ ಆಗಲಿದೆ. ಆರಂಭದಲ್ಲಿ ಸುರಿದಿದ್ದ ಮುಂಗಾರು ಮಳೆ ಕೊಂಚ ಬಿಡುವು ನೀಡಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ ಎರಡನೇ ಬಾರಿ ಮುಂಗಾರು ಸಕ್ರಿಯವಾಗಿದೆ. ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40-50ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ.

ಜೂನ್ 16ರವರೆಗೆ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ : ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಿದೆ. ಮೋಡ ಕವಿದ ವಾತಾವರಣ ಜೊತೆಗೆ ಧಾರಾಕಾರ ಮಳೆ ಆಗಿದೆ. =ಜೂನ್ 12-16ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆ ಆಗಲಿದೆ. ಮಳೆ ಜೊತೆಗೆ ಗಾಳಿಯ ವೇಗ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂನ್ 13, 14, 15, 16ರವರೆಗೆ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಆಗಲಿದೆ. ಹೀಗಾಗಿ ”ರೆಡ್ ಅಲರ್ಟ್” ಘೋಷಣೆ ಮಾಡಲಾಗಿದೆ. ಇದರೊಂದಿಗೆ ಬೆಳಗಾವಿ, ಹಾವೇರಿ, ಧಾರವಾಡಕ್ಕೆ ನಾಳೆ 01 ದಿನ ಹಾಗೂ ಕೊಡಗು ಜಿಲ್ಲೆಗೆ 02 ದಿನ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಒಟ್ಟು 03 ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!