spot_img
Monday, March 16, 2026
spot_img

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು !

ಜನಪ್ರತಿನಿಧಿ (ಬೆಳಗಾವಿ) : ಸಿಎಂ ಸಿದ್ದರಾಮಯ್ಯ ಅವರು ಧಾರಾವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಕುರಿತಂತೆ ಆರ್.ಟಿ.ಐ ಕಾರ್ಯರ‍್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ  ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಏ.28ರಂದು ನಗರದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿತ್ತು. ಭದ್ರತೆಗೆ ಧಾರಾವಾಡದ ಎಎಸ್‌ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುವಾಗ, ಬಿಜೆಪಿ ಕಾರ್ಯಕರ್ತರು ನುಗ್ಗಿ ಪ್ರತಿಭಟಿಸಿದ್ದರು. ಗದ್ದಲ ಸೃಷ್ಟಿಯಾಗಿತ್ತು. ಇದರಿಂದ ಕೋಪಗೊಂಡ ಸಿಎಂ ಸಿದ್ದರಾಮಯ್ಯ ಸ್ಥಳದಲ್ಲಿದ್ದ ನಾರಾಯಣ ಭರಮನಿ ಅವರ ಮೇಲೆ ಕೋಪಗೊಂಡು ಕೈ ಎತ್ತಿ ಹೊಡೆಯಲು ಮುಂದಾಗಿದ್ದರು.

ಸಿಎಂ ಆಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು ನಾಡಿನ ಸಮಸ್ತ ಚಿಂತನೆ-ಮ0ಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯ ನಿರತ ಅಧಿಕಾರಿಗಳಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ ‘ಪೊಲೀಸ್ ಸಮವಸ್ತçದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂತಹ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆ ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಸಚಿವ ಸೇರಿದಂತೆ ಹಲವಾರು ಸಚಿವರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲೇ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಹೀಗೆ ನಡೆದುಕೊಂಡಿರುವುದು, ರಾಜ್ಯದ ಇತರೆ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಿಗಳೆಲ್ಲರೂ ಭಯ ಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ಘಟನೆ ಕುರಿತಂತೆ ಲಭ್ಯವಿರುವ ವಿಡಿಯೋ ದೃಶ್ಯಾವಳಿಗಳ ಸಿ.ಡಿ ಹಾಗೂ ಪತ್ರಿಕಾ ವರದಿಗಳನ್ನು ಸಹ ಲಗತ್ತಿಸಿದ್ದು, ‘ಭಾರತೀಯ ನ್ಯಾಯ ಸಂಹಿತೆ -2023’ ಕಲಂ 132ರ ಅಡಿಯಲ್ಲಿ ಸಿದ್ದರಾಮಯ್ಯ ಅವರ ಮೇಲೆ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ.

ಕಾಯ್ದೆಯಲ್ಲಿದೆ 2 ವರ್ಷ ಜೈಲು ಶಿಕ್ಷೆ :
ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 132ರ ಪ್ರಕಾರ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವಾಗ ಅಥವಾ ಆ ವ್ಯಕ್ತಿಯ ಸಾರ್ವಜನುಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವುದನ್ನು ತಡೆಯುವ ಉದ್ದೇಶದಿಂದ ಅಥವಾ ಅಂಥ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ಕಾನೂನು ಬದ್ಧವಾಗಿ ನಿರ್ವಹಿಸುವಾಗ, ವ್ಯಕ್ತಿಯ ಮೇಲೆ ಹಲ್ಲೆ ನಡೆಸುವ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷಗಳವರೆಗೆ ವಿಸ್ತರಿಸುಬಹುದಾದ ಅವಧಿಯವರೆಗೆ ಯಾವುದೇ ರೀತಿಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!