spot_img
Tuesday, March 17, 2026
spot_img

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಕೋಮು ಹಿಂಸೆ ತಡೆಗಟ್ಟಲು ಕಾರ್ಯಪಡೆ ರಚನೆ : ಜಿ. ಪರಮೇಶ್ವರ್

ಜನಪ್ರತಿನಿಧಿ (ಮಂಗಳೂರು) : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆ ಸೇರಿ ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್.ಎ.ಎಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಎಸ್.ಎ.ಎಫ್ ಕಚೇರಿ ಹಾಗೂ ಪೊಲೀಸ್ ವಸತಿಗೃಹಗಳ ಸಮುಚ್ಚಯ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇಂತಹ ಒಂದು ಕಾರ್ಯಪಡೆ ರಚನೆ ಮಾಡಿದೆ. ದ್ವೇಷ ಭಾಷಣ, ಕೋಮು ಸಂಘರ್ಷ ಸೃಷಿಸುವವರನ್ನು ಹತ್ತಿಕ್ಕುವ ದಿಸೆಯಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರೋಗ್ಯ ಕ್ಷೇತ್ರದಲ್ಲಿ ಮಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕಾಗಿದೆ. ಈ ನೆಲ ಮತ್ತೆ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಬೇಕಾಗಿದೆ ಎಂದು ಹೇಳಿದರು.

ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಈ ಕಾರ್ಯಪಡೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಅಗತ್ಯ ಬಂದಲ್ಲಿ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲಾಗುವುದು. ಆದರೇ ಇಲ್ಲಿನ ಜನರು ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಈ ಕಾರ್ಯಪಡೆಗೆ ಹೆಚ್ಚು ಕೆಲಸ ಕೊಡದಂತೆ ನಡೆದುಕೊಳ್ಳಬೇಕು. ಬೇರೆ ಜಿಲ್ಲೆಗೆ ಇಂತಹ ಕಾರ್ಯಪಡೆಯ ಅಗತ್ಯ ಬರಲಾರದು ಎಂದು ಭಾವಿಸಿದ್ದೇವೆ. ಒಟ್ಟಿನಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು ಎಂದು ಹೇಳಿದ್ದಾರೆ.

ಹಿಂದೆ ಗೃಹ ಸಚಿವನಾಗಿದ್ದಾಗ ಬೆಂಗಳೂರಿನ ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿದ್ದೆ.ಚಿಕ್ಕ ಕೊಠಡಿಯಲ್ಲಿ ಅವರು ವಾಸಿಸುವ ಸ್ಥಿತಿ ಕಂಡು ರಾಜ್ಯದಾದ್ಯಂತ ಪೊಲೀಸರಿಗೆ ಸುಸಜ್ಜಿತ ವಸತಿಗೃಹ ನಿರ್ಮಾಣ ಮಾಡಬೇಕು ಯೋಚಿಸಿದ್ದೆ. ಅದಕ್ಕೆ ಅನುವಾದವೂ ಸರ್ಕಾರದಿಂದ ದೊರೆಯಿತು. ಮಂಗಳೂರು ನಗರ ಹಾಗೂ ಬೆಳ್ತಂಗಡಿ ಪೊಲೀಸ್ ವಸತಿಗೃಹಗಳನ್ನು ಉದ್ಘಾಟಿಸಲಾಗಿದೆ. ಪ್ರತಿ ವಸತಿಗೃಹವನ್ನು ಅಂದಾಗು 28 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಪರಮೇಶ್ವರ ಹೇಳಿದರು.

ಪ್ರಸ್ತುತ ಶೇ.40 ಪೊಲೀಸ್ ಸಿಬ್ಬಂದಿ ವಸತಿಗೃಹಗಳಲ್ಲೇ ವಾಸಿಸುತ್ತಿದ್ದಾರೆ. ಈ ಪ್ರಮಾಣ ಶೇ. 80ಕ್ಕೆ ತಲುಪಬೇಕು ಎಂಬ ಗುರಿ ಇದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡುತ್ತಿದ್ದು, ಶೇ.99 ರಷ್ಟು ಕೊಲೆ ಪ್ರಕರಣಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ವಹಿಸಲಾಗಿದೆ. ಸೈಬರ್ ಅಪರಾಧ ಹೆಚ್ಚುತ್ತಿದ್ದು, ಪ್ರತಿ ಕಾನ್ಸೆ÷್ಟಬಲ್ ಸೈಬರ್ ಅಪರಾಧ ಪತ್ತೆ ಹಚ್ಚುವಲ್ಲಿ ತಜ್ಞತೆ ಪಡೆಯಬೇಕೆಂಬ ಉದ್ದೇಶದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ತರಬೇತಿ ವಿಭಾಗ ಆರಂಭಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಶೈಕ್ಷಣಿಕ, ವಾಣಿಜ್ಯಿಕವಾಗಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೋಮು ದ್ವೇಷವೆ ಕಪ್ಪುಚುಕ್ಕಿಯಾಗಿದೆ. ಇದನ್ನು ನಿಯಂತ್ರಿಸಲು ರಚನೆ ಮಾಡಿರುವ ಎಸ್.ಎ.ಎಫ್. ಅನ್ನು ಶೇ.90ರಷ್ಟು ಜನರು ಸ್ವಾಗತಿಸಿದ್ದಾರೆ. ಶೇ.5ರಷ್ಟು ಜನರಿಗೆ ಇದರಿಂದ ತೊಂದರೆ ಆಗಬಹುದು. ಕಾನೂನು ಬಾಹೀತ ಚಟುವಟಿಕೆ ನಿಯಂತ್ರಿಸಿ ಜನರು ಶಾಂತಿಯಿ0ದ ನೆಲೆಸಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಇದನ್ನು ರಾಜಕೀಯವಾಗಿ ನೋಡುತ್ತಿಲ್ಲ. ಖಾಕಿಗೆ ಖಾಕಿಯೇ ಧರ್ಮವಾಗಿದ್ದು, ಯಾರೇ ತಪ್ಪು ಮಾಡಿದರೂ ಪಕ್ಷಪಾತ ಇಲ್ಲದೇ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಎಲ್ಲಾ ಪಕ್ಷಗಳು, ಸಮುದಾಯಗಳು, ಶಿಕ್ಷಣ ತಜ್ಞರು, ಸಾಹಿತಿಗಳು ಎಲ್ಲರನ್ನೂ ಒಳಗೊಂಡು ಶಾಂತಿ ಸಭೆ ನಡೆಸಲಾಗುವುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಶಾಸಕ ಅಶೋಕ ಕುಮಾರ್ ರೈ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ ಸಲೀಂ, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್, ಕಾರ್ಯಪಡೆ ಮುಖ್ಯಸ್ಥರಾಗಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!