spot_img
Thursday, March 19, 2026
spot_img

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿಬರ್ಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!