spot_img
Tuesday, March 17, 2026
spot_img

ಅನರ್ಹ ಪಡಿತರ ಚೀಟಿ ರದ್ದು: ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪಡಿತರ ಚೀಟಿಯನ್ನು ಆದ್ಯರ್ಪಣೆ (ಸರೆಂಡರ್) ಮಾಡಿಕೊಳ್ಳಬೇಕು. ಯಾವುದೇ ಪಡಿತರ ಚೀಟಿದಾರರು ಸರಕಾರದ ನಿಯಮಾವಳಿಗಳನ್ನು ಮೀರಿ ಒಂದೇ ಮನೆಯಲ್ಲಿ ವಾಸವಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅಂತಹ ಪಡಿತರ ಚೀಟಿದಾರರು ಸಂಬಂಧಪಟ್ಟ ಆಹಾರ ಶಾಖೆಯ ಅಧಿಕಾರಿಗಳಿಗೆ ಪಡಿತರ ಚೀಟಿಯನ್ನು ನೀಡಿ ಒಂದಕ್ಕಿಂತ ಹೆಚ್ಚಿನ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳಬೇಕು.

ಪಡಿತರ ಚೀಟಿದಾರರಲ್ಲಿ ಕೆಲವರು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಒದಗಿಸುವ ಅಕ್ಕಿಯನ್ನು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸದೇ ಮಾರಾಟ ಮಾಡುವುದು ಅಪರಾಧವಾಗಿದ್ದು, ಈ ಬಗ್ಗೆ ಮಾಹಿತಿ ಬಂದಲ್ಲಿ ಅಂತಹ ಕುಟುಂಬಕ್ಕೆ ಪಡಿತರ ವ್ಯವಸ್ಥೆಯಡಿ ಪಡಿತರ ಅಗತ್ಯವಿಲ್ಲವೆಂದು ತಿಳಿದು ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು.

ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಂಗಿಂತಲೂ ಹೆಚ್ಚು ಇರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು (ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು) ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ ೩ ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಮತ್ತು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುತ್ತಿರುವ ಎಲ್ಲಾ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!