spot_img
Monday, March 16, 2026
spot_img

ಸಿ‌ಐ‌ಎಸ್‌ಸಿ‌ಇ ಶಾಲೆಗಳ ಯೋಗಾಸನ ಸ್ಪರ್ಧೆಯಲ್ಲಿ ಹಟ್ಟಿಯಂಗಡಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಮಾರುತಿ ಇಂಟರ್‌ನ್ಯಾಷನಲ್ ಸ್ಕೂಲ್, ಸುಳ್ಯ ಇಲ್ಲಿ ಜೂನ್ ೧೧ರಂದು ನಡೆದ ಸಿ‌ಐ‌ಎಸ್‌ಸಿ‌ಇ ಶಾಲೆಗಳ ನ್ಯಾಷನಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ೨೦೨೫-೨೬ ವಲಯಮಟ್ಟದ ಯೋಗಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

೧೪ ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ೮ನೇ ತರಗತಿಯ ವಿದ್ಯಾರ್ಥಿಗಳಾದ ಅನ್ಮೋಲ್ ಪ್ರಥಮ ಸ್ಥಾನವನ್ನು, ಅಪರಾಜಿತ್ ನಾಲ್ಕನೇ ಸ್ಥಾನವನ್ನೂ ಪಡೆದಿರುತ್ತಾರೆ. ೧೭ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ೯ನೇ ತರಗತಿಯ ಪ್ರಫುಲ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ೧೪ ವರ್ಷದೊಳಗಿನ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ೮ನೇ ತರಗತಿಯ ವಿದ್ಯಾರ್ಥಿನಿಯಾದ ಮಾನ್ಯತಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

೧೪ ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಸ್ಥಾನವನ್ನು ಅನ್ಮೋಲ್ ಪಡೆದಿದ್ದಾರೆ.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು, ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!