spot_img
Monday, March 16, 2026
spot_img

“ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಯಾದಗಿರಿ) : ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ಮೊತ್ತ ಖರ್ಚಾಗಿದ್ದು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಕೆ.ಕೆ.ಆರ್.ಡಿ.ಬಿ ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದಗಿರಿಯಲ್ಲಿಂದು “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ ₹440 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಂಜು0ಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಉಚಿತವಾಗಿ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು. ಸ್ವಾತಂತ್ರ‍್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸೂಚನೆ ನೀಡಿರುವುದಾಗಿ ಹೇಳಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿಯ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ. ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ. ಮೋದಿಯವರು ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿಯವರು ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿAಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು. ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದು ಅವರು ಭರವಸೆ ನೀಡಿದರು.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಮ್ ಸಿಂಗ್ ಅವರ ಶ್ರಮ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!