spot_img
Monday, March 16, 2026
spot_img

ಬ್ರಹ್ಮಾವರ : ಜಿ ಎಮ್ ಶಾಲಾ ಮಕ್ಕಳಿಂದ ಭತ್ತದ ನಾಟಿ

ಬ್ರಹ್ಮಾವರ : ಇಲ್ಲಿನ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಮಕ್ಕಳಲ್ಲಿ ಕೃಷಿಯ ಕುರಿತ ಆಸಕ್ತಿಯನ್ನು ಮೂಡಿಸಲು ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಉಡುಪಿ ಉದ್ಯಾವರದ ಕುತ್ಪಾಡಿಯ ಕೃಷಿ ಭೂಮಿಯಲ್ಲಿ ಭತ್ತದ ನಾಟಿಯನ್ನು ಮಾಡಿದರು.

ಸಂಪ್ರದಾಯ ಶೈಲಿಯಲ್ಲಿ ಕಂಬಳದ ಕೋಣಗಳಿಂದ ಗದ್ದೆಯನ್ನು ಉಳುಮೆ ಮಾಡಿ ನಾಟಿಯನ್ನು ಪ್ರಾರಂಭಿಸಲಾಯಿತು. ಮಕ್ಕಳು ಸ್ಥಳೀಯ ರೈತರೊಂದಿಗೆ ನೇಜಿಯನ್ನು ನಾಟಿ ಮಾಡುವುದರ ಮೂಲಕ ಕೃಷಿಯ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ರೈತರನ್ನು ಸನ್ಮಾಯಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕೃಷಿ ಭೂಮಿಯಲ್ಲಿ ಮಕ್ಕಳ ಜೊತೆಯಿದ್ದು ಸ್ಪೂರ್ತಿ ತುಂಬಿದರು. ಮಕ್ಕಳು ಮಧ್ಯಾಹ್ನ ಚಟ್ನಿಯ ಜೊತೆ ಗಂಜಿ ಊಟವನ್ನು ಮಾಡಿ ಹಳ್ಳಿಯ ಸೊಗಡನ್ನು ಅನುಭವಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!