spot_img
Monday, March 16, 2026
spot_img

ಉನ್ನತ ವ್ಯಕ್ತಿಗಳಾಗಲು ಸಾವಿರಾರು ಅವಕಾಶ : ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಜನಪ್ರತಿನಿಧಿ (ಬ್ರಹ್ಮಾವರ) : ಸಮಾಜದಲ್ಲಿ ಉನ್ನತ ಹಂತದ ಜೀವನ ನಡೆಸಲು ಇಂದು ಸಾವಿರಾರು ದಾರಿಗಳಿವೆ. ಈ ತರಭೇತಿಯ ಉಪಯೋಗವನ್ನು ಬಳಸಿಕೊಂಡು ಮನಃಪರಿವರ್ತನೆಗೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಜೈಲುವಾಸಿಗಳಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ, ಜಿಲ್ಲಾ ಕಾರಾಗೃಹ ಹಾಗೂ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ಆಶ್ರಯದಲ್ಲಿ ೬ ದಿನಗಳ ಕಾಲ ಉಡುಪಿ ಜಿಲ್ಲೆಯ ಕಾರಾಗೃಹ ವಾಸಿಗಳಿಗೆ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಭೇತಿಯ ಸಮಾರೋಪದಲ್ಲಿ ಅವರು ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಜೀವನದಲ್ಲಿ ತಪ್ಪು ಮಾಡುವುದು ಸಹಜ. ತಿದ್ದಿ ನಡೆಯುವುದು ಮನುಜ ಧರ್ಮ. ಹೊಸ ಬದುಕನ್ನು ರೂಪಿಸಿಕೊಳ್ಳಲು ರುಡ್ ಸೆಟ್ ಸಂಸ್ಥೆಯ ತರಭೇತಿ ಮೂಲಕ ಅವಕಾಶ ಮಾಡಿಕೊಟ್ಟಿದೆ. ಕಾರಾಗೃಹದಿಂದ ಬಿಡುಗಡೆಯಾದ ನಂತರ ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಿ ಬದುಕು ರೂಪಿಸಿಕೊಳ್ಳಲು ಹಲವಾರು ಅವಕಾಶಗಳಿವೆ. ಹೊಸ ವ್ಯಕ್ತಿಯಾಗಿ, ಹೊಸ ಕನಸುಗಳೊಂದಿಗೆ ಜೀವನ ಆರಂಭಿಸಿ ಎಂದು ಹೇಳಿದರು.

ಉಡುಪಿ ಜಿಲ್ಲಾ ಕಾರಾಗೃಹ ಅಧಿಕ್ಷಕ ವಿಜಯಕುಮಾರ ಚವ್ಹಾಣ್ ಮಾತನಾಡಿ, ತರಬೇತಿ ಬದುಕನ್ನು ರೂಪಿಸಲು ವೇದಿಕೆಯಾಗಿದೆ. ಹೊಸ ಆಯಾಮಗಳೊಂದಿಗೆ ಭವಿಷ್ಯದಲ್ಲಿ ಗೌರವಯುತ ವ್ಯಕ್ತಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಬೊಮ್ಮಯ್ಯ ಎಂ. ಮಾತನಾಡಿ, ತರಬೇತಿ ಜೈಲುವಾಸಿಗಳ ಮನಃಪರಿವರ್ತನೆ ಮಾಡುವುದರ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ತರಬೇತಿ ನೀಡಲಾಗಿದೆ. ಸ್ವ-ಉದ್ಯೋಗ ಮಾಡಬಲ್ಲೆ ಎಂಬ ಆತ್ಮ ವಿಶ್ವಾಸ ತುಂಬಿದ್ದೇವೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಿರುದ್ಯೋಗ ಹೋಗಲಾಡಿಸಲು ರುಡ್‌ಸೆಟ್ ಸಂಸ್ಥೆಯ ಮೂಲಕ ಉತ್ತಮ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಅರುಣ್ ಬಿ. ಭಾಗವಹಿಸಿದ್ದರು.

ರುಡ್ ಸೆಟ್ ಸಂಸ್ಥೆಯ ಕಚೇರಿ ಸಹಾಯಕ ಶಾಂತಪ್ಪ ನಿರೂಪಿಸಿದರು. ಉಪನ್ಯಾಸಕ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾರಾಗೃಹದ ವಾರ್ಡರ್ ರೇಷ್ಮಾ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!