spot_img
Monday, March 16, 2026
spot_img

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ, ಹಲವರು ವಶಕ್ಕೆ

ಜನಪ್ರತಿನಿಧಿ (ಬೆಂಗಳೂರು) : ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನ ನಡೆಸಿದಾಗ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಬೆ0ಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ವಿಧಾನಸೌಧ ಮುಂಭಾಗ ಆರ್‌ಸಿಬಿ ಕಾರ್ಯಕ್ರಮ ಆಯೋಜಿಸಿದ್ದು ಕಾಂಗ್ರೆಸ್ ಸರ್ಕಾರ, ಆರ್‌ಸಿಬಿ ಅಭಿಮಾನಿಗಳನ್ನು ಸ್ಟೇಡಿಯಂಗೆ ಕಳಿಸಿದ್ದು ಸರ್ಕಾರ, ಆರ್‌ಸಿಬಿ ಅಭಿಮಾನಿಗಳ ದಾರುಣ ಸಾವಿಗೆ ಕಾರಣವಾಗಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಗೃಹ ಸಚಿವ ಪರಮೇಶ್ವರ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯ ವೇದಿಕೆಯಲ್ಲಿ ಅಣಕು ಕಪ್ ಪ್ರದರ್ಶನ ಮಾಡಲಾಯಿತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮುಖವಾಡ ಧರಿಸಿದ ಕಾರ್ಯಕರ್ತರು ಅಣಕು ಕಪ್ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇದೇ ವೇಳೆ ಕೆಲ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು,ವಶಕ್ಕೆ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!