spot_img
Wednesday, March 18, 2026
spot_img

ಐಶ್ವರ್ಯ ಗೌಡ ಕೇಸ್ : ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ

ಜನಪ್ರತಿನಿಧಿ (ಬೆಂಗಳೂರು) : ಐಶ್ವರ್ಯ ಗೌಡ ಪ್ರಕರಣದ ತನಿಖೆ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬ0ಧಿಸಿದ0ತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿದೆ.

ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.

ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!