spot_img
Monday, March 16, 2026
spot_img

ವಿಶ್ವ ಪರಿಸರ ದಿನಾಚರಣೆ – 2025 | ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಅಗತ್ಯ | ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ – 2025″ನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ “ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ” ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರು ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡ0ತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದವರು ಹೇಳಿದರು.

ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಕೋಟಿ ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ. ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ನಾವಿಂದು ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ, ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಇದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಿತು ‘ನನ್ನ ಜೀವ ನನ್ನ ಮರ’ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ. ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡಲಾಗುವುದು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!