spot_img
Monday, March 16, 2026
spot_img

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | ಮುಚ್ಚಿದ ಲಕೋಟೆಯಲ್ಲಿ ಸ್ಥಿತಿಗತಿ ವರದಿ ಸಲ್ಲಿಕೆ | ರಾಜ್ಯ ಸರ್ಕಾರದ ಇಂಗಿತವನ್ನು ಪ್ರಶ್ನಿಸಿದ ಹೈಕೋರ್ಟ್

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ಕಾಲ್ತುಳಿತಕ್ಕೆ ಸಂಬ0ಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಇಂಗಿತವನ್ನು ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಿ ಹೇಳಿದೆ.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಮತ್ತು ನ್ಯಾಯಾಧೀಶ ಸಿಎಂ ಜೋಶಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.

ಸರ್ಕಾರದಿಂದ ಸಿದ್ಧಪಡಿಸಲಾಗಿರುವ ಮಧ್ಯಂತರ ಮೌಲ್ಯಮಾಪನ ವರದಿ ಮತ್ತು ಪ್ರಾಥಮಿಕ ತನಿಖೆ ಉಲ್ಲೇಖಿಸಿದ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಮಾಹಿತಿ ಬಹಿರಂಗಪಡಿಸುವಿಕೆಯಿ0ದ ಸರ್ಕಾರ ಹಿಂಜರಿಕೆಯಿ0ದ ಹಿಂದೆ ಸರಿಯುವುದಿಲ್ಲ. ಆದರೆ ನಡೆಯುತ್ತಿರುವ ವಿಚಾರಣೆಗಳನ್ನು ಪೂರ್ವಾಗ್ರಹದಿಂದ ತಪ್ಪಿಸಲು ಬಯಸಿದ್ದು, ಮುಂದಿನ ವಾರ ಎರಡು ವರದಿಗಳನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು.

ವರದಿಯಲ್ಲಿನ ಕೆಲವು ಅವಲೋಕನಗಳು ಪ್ರಾಥಮಿಕ ಸ್ವರೂಪದ್ದಾಗಿದ್ದು, ಅಕಾಲಿಕವಾಗಿ ಬಹಿರಂಗಪಡಿಸಿದರೆ ಮಾಧ್ಯಮಗಳಿಂದ ಪ್ರಚೋದನೆಗೆ ಒಳಗಾಗಬಹುದು ಎಂದು ಅಡ್ವೊಕೇಟ್ ಜನರಲ್ ಹೇಳಿದರು. ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವುದನ್ನು ಪ್ರಶ್ನಿಸುತ್ತಿರುವುದಾಗಿ ಹೇಳಿದ ನ್ಯಾಯಾಲಯ, ಅಮಿಕಸ್ ಕ್ಯೂರಿಯನ್ನು ನೇಮಿಸುವ ನಿರ್ಧಾರವನ್ನು ಪ್ರಕಟಿಸಿತು.

ತನಿಖಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಗೆ ಸ್ಪಷ್ಟ ಆದ್ಯತೆ ನೀಡುವಂತೆ ಸೂಚಿಸಿತು. ಎಲ್ಲಾ ವರದಿ ಬರುವವರೆಗೂ 20 ರಿಂದ 25 ದಿನಗಳ ಕಾಲ ವಿಚಾರಣೆ ಮುಂದೂಡುವ0ತೆ ಮುಂದೂಡುವ0ತೆ ಎಜಿ ಕೋರಿದರು. ಆದರೆ, ಇದನ್ನು ಪರಿಗಣಿಸದ ನ್ಯಾಯಾಲಯ, ಕೆಎಸ್ ಸಿಎ, ಆರ್ ಸಿಬಿ ಮತ್ತು ಡಿಎನ್ ಎ ನೆಟ್ ವರ್ಕ್ ಗೆ ನೋಟಿಸ್ ನೀಡಲು ಆದೇಶಿಸಿತು. ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!