spot_img
Tuesday, March 17, 2026
spot_img

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ | ಕನ್ನಡಿಗರ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗಗಳು ತೆರೆಯಲು ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಇದಕ್ಕೆ ಕನ್ನಡಿಗರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ 10 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ಕೆಎಂಎಫ್ ನಂದಿನಿ ಇರುವಾಗ ಅಮೂಲ್ ಯಾಕೆ ಎಂದು ಕನ್ನಡಿಗರು ಪ್ರಶ್ನೆ ಮಾಡುತ್ತಿದ್ದಾರೆ.

10 ಮೆಟ್ರೋ ಸ್ಟೇಷನ್‌ಗಳಲ್ಲಿ ಅಮೂಲ್ ಮಳಿಗೆ
ಪ್ರಾಯೋಗಿಕವಾಗಿ 10 ಮೆಟ್ರೋ ಸ್ಟೇಷನ್ ಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲಾಗಿದೆ. ಅಮೂಲ್ ಜೊತೆಗೆ ಬಿಎಂಆರ್‌ಸಿಎಲ್ ಒಪ್ಪಂದ ಮಾಡಿಕೊಂಡಿದೆ. ಕೆಎಂಎಫ್ ನಂದಿನಿ ಇದ್ದರೂ ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ವಿರೋಧ ವ್ಯಕ್ತವಾಗಿದೆ.

ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೈಯಪ್ಪನಹಳ್ಳಿ, ಟ್ರಿನಿಟಿ, ಜಯನಗರ ಸೇರಿ 10 ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಮಳಿಗೆ ತೆರೆದಿದೆ. ಗುಜರಾತ್ ಮೂಲದ ಕಂಪನಿಗೆ ಅವಕಾಶ ನೀಡಿದ ಹಿನ್ನಲೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈಗ ಮುಚ್ಚಿಸುವುದಕ್ಕೆ ಆಗುವುದಿಲ್ಲ : ಡಿಸಿಎಂ ಡಿಕೆಶಿ
ಈ ಬಗ್ಗೆ ಬೆಂಗಳೂರಿನಲ್ಲಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ ಅವಕಾಶ ನೀಡಲಾಗಿದೆ. ಆದರೆ ಕೆಎಂಎಫ್ ಅವರು ಎಲ್ಲೂ ಟೆಂಡರ್‌ಗೆ ಅರ್ಜಿ ಹಾಕಿಲ್ಲ ಎಂದವರು ಹೇಳಿದ್ದಲ್ಲದೇ, ಎಂಟು ಕಡೆ ಅರ್ಜಿ ಹಾಕಿ, ಓಪನ್ ಮಾಡಿಕೊಳ್ಳಿ ಅಂತ ಹೇಳಿದ್ದೇನೆ. ಎರಡು ಮಳಿಗೆಗಳನ್ನು ಅಮೂಲ್ ಅವರು ಓಪನ್ ಮಾಡಿದ್ದಾರೆ. ಈಗ ಮುಚ್ಚಿಸುವುದಕ್ಕೆ ಆಗುವುದಿಲ್ಲ. ಅದು ಗ್ಲೋಬಲ್ ಟೆಂಡರ್ ಆಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!