spot_img
Monday, March 16, 2026
spot_img

ಹೆಚ್.ಡಿ.ಕೆ ಭೂ ಒತ್ತುವರಿ ಪ್ರಕರಣ : ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬ0ಧಿಸಿದ0ತೆ ಇಂದು (ಗುರುವಾರ) ಹೈಕೋರ್ಟ್ ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನವರಿ ತಿಂಗಳಲ್ಲಿ ಸರ್ಕಾರ ಅಕ್ರಮ ಭೂ ಒತ್ತುವರಿಗೆ ಆರೋಪ ಪ್ರಕರಣ ತನಿಖೆ ಮಾಡಲು ಎಸ್‌ಐಟಿ ರಚಿಸಿತ್ತು. ಹೀಗಾಗಿ ಎಸ್‌ಐಟಿ ರಚನೆ ಪ್ರಶ್ನಿಸಿ ಹೆಚ್ ಡಿ ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್, ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆ ಮೂಲಕ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬ0ಧ ಕಂದಾಯ ಇಲಾಖೆ ಎಸ್‌ಐಟಿ ರಚನೆ ಮಾಡಿಕೊಂಡಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!