spot_img
Monday, March 16, 2026
spot_img

‘ಥಗ್ ಲೈಫ್’ ಬಿಡುಗಡೆ | ಕನ್ನಡಪರ ಸಂಘಟನೆಗಳ ನಾಯಕರಿಗೆ ಮುನ್ನೆಚ್ಚರಿಕೆ ನೋಟೀಸ್

ಜನಪ್ರತಿನಿಧಿ (ಬೆಂಗಳೂರು) : ತಮಿಳು ನಟ ಕಮಲ್ ಹಾಸನ್ ಅವರ ‘ಥಗ್ ಲೈಫ್ ಚಲನಚಿತ್ರ ಬಿಡುಗಡೆ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಕನ್ನಡಪರ ಸಂಘಟನೆಗಳ ನಾಯಕರಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಥಗ್ ಲೈಫ್ ಬಿಡುಗಡೆಗೆ ನಡೆದಿವ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ಪೊಲೀಸರು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.

‘ನಗರದ ಫ್ರೀಡಂ ಪಾರ್ಕ್ ಉದ್ಯಾನವನದಲ್ಲಿ ಹೋರಾಟಕ್ಕೆ ಅವಕಾಶವಿದೆ. ಅದಕ್ಕೆ ಹೊರತಾಗಿ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಇಲ್ಲ. ಕೋರ್ಟ್ ಆದೇಶ ಉಲ್ಲಂಘಿಸಿದರೇ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ನೋಟೀಸ್ ನಲ್ಲಿ ಹೇಳಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮನೆಗೆ ಪೊಲೀಸರು ನೋಟೀಸ್ ಅಂಟಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!