spot_img
Monday, March 16, 2026
spot_img

ಸಂಸ್ಕಾರಯುತ, ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯತೆ- ವಿಧುಶೇಖರಭಾರತೀ ಶ್ರೀ

ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಡಶಾಲೆ ಸುವಿದ್ಯಾರಂಭ: ನೂತನ ಕಟ್ಟಡ ಉದ್ಘಾಟನೆ
ಕುಂದಾಪುರ: ಪ್ರತಿ ಮಗುವಿನಲ್ಲೂ ವಿಶೇಷವಾದ ಪ್ರತಿಭೆ ಇರುತ್ತದೆ. ಇಂತಹ ಪ್ರತಿಭೆಗಳು ಬೆಳಗಲು ಸೂಕ್ತ ವೇದಿಕೆ ಅವಶ್ಯ. ಇಂಥಹ ವಿದ್ಯಾಸಂಸ್ಥೆಗಳು ಶಿಕ್ಷಣದ ಜೊತೆಯಲ್ಲಿ ಮಗುವಿನಲ್ಲಿ ಅಡಗಿರುವ ಸುಪ್ತ ಪ್ರತಿಭೆಗೂ ಅವಕಾಶ ನೀಡುವುದರಿಂದ ಅಂಥಹ ಪ್ರತಿಭೆಗಳಿಂದ ದೇಶಕ್ಕೂ ಸಮಾಜಕ್ಕೂ ಅಮೂಲ್ಯ ಕೊಡುಗೆ ದೊರೆಯುತ್ತದೆ. ಆ ನಿಟ್ಟಿನಲ್ಲಿ ಸುಜ್ಞಾನ ವಿದ್ಯಾಸಂಸ್ಥೆಯ ಚಿಂತನೆ, ಯೋಚನೆಗಳು ಶ್ಲಾಘನೀಯವಾಗಿವೆ ಎಂದು ಎಂದು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದಜಗದ್ಗುರು ಶ್ರೀ ವಿಧುಶೇಖರಭಾರತೀ ಶ್ರೀಗಳು ಅಭಿಪ್ರಾಯ ಪಟ್ಟರು.
ಕುಂದಾಪುರ ತಾಲೂಕು ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ನೆರವೇರಿಸಿ ಆಶೀರ್ವಚನ ನೀಡಿದರು.
ಸುಜ್ಞಾನ ವಿದ್ಯಾಸಂಸ್ಥೆ ಅತ್ಯಂತ ಅಲ್ಪಾವಧಿಯಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಜನಮಾನಸ ತಲುಪಿದೆ. ಈ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ವಿದ್ಯಾಸಂಸ್ಥೆಯ ಅವಶ್ಯಕತೆ ಇದ್ದು, ಈ ವಿದ್ಯಾಸಂಸ್ಥೆಯ ಮೂಲಕ ಅಗತ್ಯತೆ ಈಡೇರಿದೆ. ಉತ್ತಮ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವಲ್ಲಿ ಈ ಶಿಕ್ಷಣ ಸಂಸ್ಥೆಯ ಧ್ಯೇಯ ಗಮನಿಸುಬಹುದಾಗಿದೆ. ಎಂದರು.
ಪ್ರತಿಭೆಗೆ ಸೂಕ್ತ ಪ್ರೋತ್ಸಾಹ, ಭಾರತೀಯ ಸಂಸ್ಕಾರ ಹಾಗೂ ವ್ಯಕ್ತಿತ್ವದ ಬೆಳವಣಿಗೆಗೆ ಅವಶ್ಯಕವಾದ ಶಿಕ್ಷಣ, ವಿದ್ಯಾರ್ಥಿಯ ಸರ್ವತೋಮುಖ ಪ್ರಗತಿಗೆ ಶಿಕ್ಷಣ ಸಂಸ್ಥೆಗಳು ಆಧ್ಯ ಗಮನ ಹರಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ನಿವೃತ್ತ ಪ್ರಾಂಶುಪಾಲರಾದ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ , ಇಂದ್ರಾಳಿ ಜಯಕರ ಶೆಟ್ಟಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಉಪಸ್ಥಿತರಿದ್ದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತಗಳನ್ನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!