spot_img
Tuesday, March 17, 2026
spot_img

ಪ್ರಶಸ್ತಿ ಪುರಸ್ಕೃತ ವಕ್ವಾಡಿ ಸದಾನಂದ ಶೆಟ್ಟಿಯವರಿಗೆ ಸನ್ಮಾನ

ಕುಂದಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ 2024-25ನೇ ಸಾಲಿನಲ್ಲಿ ಮೆಡಲ್ ಆಫ್ ಮೆರಿಟ್ ಸರ್ವಿಸ್ ಅವಾರ್ಡ್ ಪಡೆದ ಪಿ‌ಎಂ ಶ್ರೀ ಕುವೆಂಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ ಶಿಕ್ಷಕರಾದ ವಕ್ವಾಡಿ ಸದಾನಂದ ಶೆಟ್ಟಿಯವರನ್ನು ಕುಂದಾಪುರ ಫ್ರೆಂಡ್ಸ್ ವತಿಯಿಂದ ಜೂ. 17 ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಟೀಚರ್ಸ್ ಬ್ಯಾಂಕ್ ಉಡುಪಿ ಇದರ ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನೀಡಲ್ಪಡುವ ಉನ್ನತ ಪ್ರಶಸ್ತಿಗೆ ಭಾಜನರಾದ ಸದಾನಂದ ಶೆಟ್ಟಿಯವರ ಕರ್ತವ್ಯ ಪರತೆ ಮತ್ತು ಬದ್ಧತೆಯನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕರಾದ ಸಂತೋಷ್ ಕುಮಾರ್ ಹೆಗ್ಡೆಯವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಶುಭ ಹಾರೈಸಿದರು. ಕುಂದಾಪುರ ವಲಯದ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಭಂಡಾರಿಯವರು ಶುಭ ಹಾರೈಸಿದರು. ಕೆಂಜೂರು ವೀರೇಶ್ವರ ಶಾಲಾ ಮುಖ್ಯ ಶಿಕ್ಷಕ ಶ್ರೀನವೀನ್ ಚಂದ್ರ ಶೆಟ್ಟಿಯವರು ಪ್ರಸ್ತಾವನೆಗೈದರು. ಉಡುಪಿ ವಲಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬೈದೆಬೆಟ್ಟು ಸತೀಶ್ ಶೆಟ್ಟಿ ವಂದಿಸಿದರು. ಹಲವಾರು ಶಿಕ್ಷಕರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!