spot_img
Monday, March 16, 2026
spot_img

ಇದೇ ಮೊದಲ ಬಾರಿಗೆ 11 ದಿನಗಳ ಕಾಲ ನಡೆಯಲಿದೆ ಮೈಸೂರು ದಸರಾ | ಯಾಕೆ ಈ ವರ್ಷ ವಿಶೇಷ ?

ಜನಪ್ರತಿನಿಧಿ (ಮೈಸೂರು) : ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 11 ದಿನದ ದಸರಾ ಬಂದಿದೆ. ಪ್ರತಿ ವರ್ಷ 10 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನಗಳ ಕಾಲ ನಡೆಯಲಿದೆಯಂತೆ.

ಪ್ರತಿ ವರ್ಷ 9 ದಿನ ನವರಾತ್ರಿ 10ನೇ ದಿನ ವಿಜಯದಶಮಿ ಆಚರಣೆ ಮಾಡುವುದು ವಾಡಿಕೆ. ಆದರೆ ಮಧ್ಯೆದಲ್ಲಿ ಪಂಚಮಿ ತಿಥಿ ಎರಡು ದಿನ ಬಂದಿದ್ದರಿAದ ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಆಚರಣೆ ಮಾಡಲಾಗುತ್ತಿದೆ. ತಿಥಿಗಳ ಪ್ರಕಾರ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಅಂದರೇ, 11 ದಿನಗಳ ಕಾಲ ಈ ಬಾರಿಯ ದಸರಾ ಉತ್ಸವ ನಡೆಯಲಿದೆ. ಸೆ.24 ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರಿಯುವ ಕಾರಣ ದಸರಾ 11 ದಿನಗಳ ಕಾಲ ನಡೆಯಲಿದೆ ಎನ್ನುವುದು ಪಂಚಾ0ಗ ಹೇಳುತ್ತದೆ.

ದಸರಾ ಪರಂಪರೆ ಶುರುವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ 10 ದಿನಗಳು ದಸರಾ ನಡೆದಿದೆ. ಆದರೆ ಈ ಬಾರಿ 11 ದಿನಗಳ ದಸರಾ ನಡೆಯುವ ಮೂಲಕ ಹೊಸ ದಾಖಲೆ ಸೃಷ್ಟಿ ಆಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳ ಬಗ್ಗೆ ಧಾರ್ಮಿಕವಾಗಿ ಚರ್ಚೆಗಳು ಶುರುವಾಗಿವೆ. 1410 ರಿಂದ ಮೈಸೂರು ಸಂಸ್ಥಾನದ ಆಳ್ವಿಕೆಯಲ್ಲಿ ದಸರಾ ಆಚರಣೆ ನಡೆದಿದ್ದು 11 ದಿನಗಳ ಕಾಲ ದಸರಾ ನಡೆದ ಉದಾಹರಣೆಗಳಿಲ್ಲ. ಮಹಾಲಯ ಅಮಾವಾಸ್ಯೆಯ ಮರು ದಿನದಿಂದ ನವರಾತ್ರಿ ಶುರುವಾಗಿ 9 ದಿನಗಳು ಕಳೆದ ನಂತರದ ದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ಈ ಸಂಬ0ಧಿಸಿದ0ತೆ ಧಾರ್ಮಿಕ ಚಿಂತಕ ಡಾ. ಶೆಲ್ವಪಿಳೈ ಅಯ್ಯಂಗಾರ್ ಅವರು ಮಾಧ್ಯಮಗಳ ವರದಿಗಾರರೊಂದಿಗೆ ಮಾತನಾಡಿದ್ದಾರೆ. ನೂರು ವರ್ಷಗಳ ಹಿಂದೆ ದಸರಾ 11 ದಿನಗÀಳುÀ ನಡೆದಿರಬಹುದು. ಆದರೇ, ನನ್ನ ಅನುಭವದಲ್ಲಿ ಇದೇ ಮೊದಲು 11 ದಿನಗಳ ಕಾಲ ನಡೆಯುತ್ತಿದೆ. ಪಂಚಾAಗದಲ್ಲಿ ಸೆ.21ರಂದು ಮಹಾಲಯ ಅಮಾವಾಸ್ಯೆ ಬರುತ್ತದೆ. ಅದರ ಮಾರನೇ ದಿನದಿಂದ ಅಂದರೇ, ಸೆ.22ರಿಂದ ಅ.2ರ ವರೆಗೆ ಶರನ್ನವರಾತ್ರಿ ಮತ್ತು ವಿಜಯದಶಮಿ ನಡೆಯುತ್ತದೆ ಎಂದು ಅವರು ವಿವರಿಸಿದ್ದಾರೆ.

ಪಂಚಾAಗದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥಿ ಸರಿಯಿದೆ. ಆದರೆ ಪಂಚಮಿ ಸೆ.26, 27ರಂದು ಎರಡೂ ದಿನಗಳು ಬಂದಿದೆ. ಆ 2 ದಿನಗಳು ಗಣನೆಗೆ ತೆಗೆದುಕೊಂಡರೆ 10ನೇ ದಿನ ಮಹಾನವಮಿ (ನವಮಿ) ಬರುತ್ತದೆ. 11ನೇ ದಿನ ದಶಮಿ ಬರುತ್ತದೆ. ಇದು ಸಾಮಾನ್ಯ ದಿನಗಳಲ್ಲಿ ಬಂದಿರುವುದು ಉಂಟು, ಆದರೆ ನೂರಾರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಈ ತಿಥಿ ಬಂದಿರುವುದು ವಿಶೇಷ ಎಂದು ಶೆಲ್ವಪಿಳೈ ಅಯ್ಯಂಗಾರ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!