spot_img
Monday, March 16, 2026
spot_img

ಮಂಗಳೂರು | ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಎಸ್.ಪಿ ಕ್ರಮ | 116 ಪೊಲೀಸರ ವರ್ಗಾವಣೆ

ಜನಪ್ರತಿನಿಧಿ (ಮಂಗಳೂರು) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ಮಾಡುವ ಉದ್ದೇಶದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಹತ್ವದ ಕ್ರಮ ವಹಿಸಿದ್ದು, ಅನೇಕ ವರ್ಷಗಳಿಂದ ಒಂದೇ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಹಾಗೂ ಕಾನ್ ಸ್ಟೇಬಲ್ ಗಳನ್ನು ವರ್ಗಾವಣೆ ಮಾಡಿದ್ದಾರೆ.

ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸತ್ತಿದ್ದ ಒಟ್ಟು ಏಳು ಮಂದಿ ಎಎಸ್.ಐ, 31 ಹೆಡ್ ಕಾನ್ಸ್ ಸ್ಟೇಬಲ್ ಗಳು ಹಾಗೂ 78 ಮಂದಿ ಕಾನ್ಸ್ ಸ್ಟೇಬಲ್ ಗಳನ್ನು ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ಜೂನ್ 10ರಂಉ ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್.ಪಿ ಕಚೇರಿಯ ಮೂಲಕಗಳು ತಿಳಿಸಿವೆ.

ಕೆಲವು ಪೊಲೀಸ್ ಅಧಿಕಾರಿಗಳು ಹಾಗೂ ಕಾನ್ ಸ್ಟೇಬಲ್ ಗಳು ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಹಿಸುತ್ತಿದ್ದರು.

ನಗರಕ್ಕೆ ಭೇಟಿ ನೀಡಿದ್ಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಜಿಲ್ಲೆಯಲ್ಲಿ ಧರ್ಮಧಾರಿತ ಕೊಲೆಗಳು ನಡೆದ ಬಳಿಕ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅನೇಕ ವರ್ಷಗಳಿಂದ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡುವಂತೆ ನಿರ್ದೇಶನ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!