spot_img
Monday, March 16, 2026
spot_img

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ | ರಾಜಕೀಯ ಮಾತನಾಡದಂತೆ ಪೊಲೀಸರಿಂದ ನೋಟೀಸ್

ಜನಪ್ರತಿನಿಧಿ (ಕುಂದಾಪುರ) : ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಬಾರದು ಎಂದು ತಾಕೀತು ಮಾಡಿ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕುಂದಾಪುರ ಪೊಲೀಸರು ನೋಟಿಸ್ ನೀಡಿದ್ದಾರೆ.

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಂದ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಜೂ.20, 21 ಮತ್ತು 22 ರಂದು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಪೊಲೀಸ್ ಅಧಿಕಾರಿಗಳು, ರಾಜಕೀಯ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಆಯೋಜಕರಿಗೆ ಹಾಗೂ ಸೂಲಿಬೆಲೆಯವರಿಗೆ ನೀಡಿರುವ ನೊಟೀಸ್ ನಲ್ಲಿ ಷರತ್ತು ವಿಧಿಸಿದ್ದಾರೆ.

ತಮಗೆ ನೊಟೀಸ್ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ.

ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ. ನನಗೆ ನೋಟಿಸ್ ಹೊಸತಲ್ಲ, ಬಹಳ ಕಡೆಗಳಲ್ಲಿ ನೋಟಿಸ್ ಕೊಟ್ಟಿದ್ದಾರೆ. ಈ ಬಾರಿ ರಾಜಕೀಯ ಮಾತನಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದಿದ್ದಾರೆ. ನೆಹರು, ಇಂದಿರಾ, ರಾಜೀವ್ ಕುರಿತಂತೆ ಮಾತನಾಡಬಾರದು ಎಂದು ಅರ್ಥವೇ? ಘಜ್ನಿ, ಘೋರಿ, ಔರಂಗಜೇಬ್ ಮುಂತಾದ ಕ್ರೂರಿಗಳ ತೇಜೋವಧೆ ಮಾಡಬಾರದೆಂದು ಅರ್ಥವೇ? ಕುಂದಾಪುರ ಪೊಲೀಸರೇ ಮಾಹಿತಿ ಕೊಟ್ಟರೆ ಉತ್ತಮ. ನಾನು ಕುಂದಾಪುರಕ್ಕೆ ಬರಬಾರದೆಂದು ಹೇಳುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ, ನಾನು ಕುಂದಾಪುರಕ್ಕೆ ಹೋಗಿಯೇ ಹೋಗುತ್ತೇನೆ ಎಂದು ಚಕ್ರವರ್ತಿ ತಿಳಿಸಿದ್ದಾರೆ.

ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಹೇಳುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಯೋಜಕ ನಿರಂಜನ್ ಶೆಟ್ಟಿ, ಎನ್.ಎಸ್.ಯು.ಐ ನವರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಶ್ಮೀರದ ವಿಚಾರ ಮಾತನಾಡದೇ ಅಖಂಡ ಭಾರತದ ಬಗ್ಗೆ ಉಪನ್ಯಾಸ ಅಸಾಧ್ಯ. ಕಾಶ್ಮೀರ ಕಾಂಗ್ರೆಸ್ ಕಾಲದಲ್ಲಿ ಸಮಸ್ಯೆ ಆಗಿ ಉಳಿದಿತ್ತು. ಈ ವಿಚಾರ ಜನರಿಗೆ ತಿಳಿಯಬಾರದು ಎನ್ನುವುದು ಇವರ ಉದ್ದೇಶ ಇರಬಹುದು. ಕಾಂಗ್ರೆಸ್ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ತಡೆಯಲು ಮುಂದಾಗಿದ್ದಾರೆ. ನಾವು ಕಾರ್ಯಕ್ರಮ ಮಾಡಿಯೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!