spot_img
Wednesday, March 18, 2026
spot_img

ಸೂಲಿಬೆಲೆ ಸುಳ್ಳಿನ ಚಕ್ರವರ್ತಿ | ಸೂಲಿಬೆಲೆಯಿಂದ ನಾವು ಪಾಠ ಕಲಿಯಬೇಕಂತಿಲ್ಲ : ಹೆಬ್ಬಾಳ್ಕರ್ ಕಿಡಿ

ಜನಪ್ರತಿನಿಧಿ (ಉಡುಪಿ) : ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತದ ಬಗ್ಗೆ ಮಾತನಾಡುವ ಅವರು, ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ಕರ್ನಾಟಕಕ್ಕೆ ತಿಳಿದಿದೆ. ಕಪ್ಪು ಇರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪಗೆ ಮಾಡುವುದರಲ್ಲಿ ಅವರು ನಿಸ್ಸೀಮರಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪುರದಲ್ಲಿ ನಡಯಲಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಪೊಲೀಸರು ನೋಟೀಸ್ ಕೊಟ್ಟಿರುವುದಕ್ಕೆ ಸಂಬ0ಧಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು ಮಾಧ್ಯಮಗಳ ವರದಿಗಾರರಿಗೆ ಉಡುಪಿಯಲ್ಲಿ ಇಂದು(ಶುಕ್ರವಾರ) ಸ್ಪಂದಿಸಿದರು.

ವಾಕ್ ಸ್ವಾತಂತ್ರö್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರö್ಯ ಕಾಂಗ್ರೆಸ್ ಪಕ್ಷ ನೀಡಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿದಿ ಪಕ್ಷ ಕಾಂಗ್ರೆಸ್. ಆದ್ದರಿಂದ ನಾವು ಚಕ್ರವರ್ತಿ ಸೂಲಿಬೆಲೆಯಿಂದ ಪಾಠ ಕಲಿಯಬೇಕಿಲ್ಲ. ಮೂರು ದಿನಗಳ ಕಾಲ ಕುಂದಾಪುರದಲ್ಲಿ ಸೂಲಿಬೆಲೆ ಅವರ ಕಾರ್ಯಕ್ರಮ ಇರುವುದು ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ಆದರೇ, ದ್ವೇಷ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬಿತ್ತುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರಿಗೆ ವಸತಿಯಲ್ಲಿ ಶೇ.15ರಷ್ಟು ಮೀಸಲಾತಿ ನೀಡಿರುವುದಕ್ಕೆ ಸಂಬ0ಧಿಸಿದ0ತೆ ವರದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಇದು ಕೇಂದ್ರ ಸರ್ಕಾರದಿಂದ ಆಗಿರುವ ಯೋಜನೆ. ಅದಕ್ಕೆ ನಾವು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ. ಬಿಜೆಪಿಯವರು ಮೊಸರಲ್ಲಿ ಕಲ್ಲನ್ನು ಹುಡುಕುತ್ತಾರೆ. ಬಿಜೆಪಿಯವರಿಗೆ ರಾಜಕೀಯ ಮಾಡುವುದಕ್ಕೆ ಬೇರೆ ದಾರಿ ಇಲ್ಲ. ಮೊದಲು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದರು. ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಅವರಿಗೆ ರಾಜಕೀಯ ಮಾಡುವುದಕ್ಕೆ ಬೇರೆ ದಾರಿ ಇಲ್ಲ. ಜನರ ದಿಕ್ಕನ್ನು ತಪ್ಪಿಸುವುದಕ್ಕೆ ಏನೆಲ್ಲಾ ಸಾಧ್ಯವಿದೆಯೋ ಅದನ್ನೆಲ್ಲಾ ಮಾಡುವುದರಲ್ಲಿ ಬಿಜೆಪಿಯವರು ಸದಾ ಮುಂದಿರುತ್ತಾರೆ ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯದರು.

ಇನ್ನು, ಕರಾವಳಿ ಕರ್ನಾಟಕದಲ್ಲಿ ಕೋಮು ನಿಗ್ರಹ ಪಡೆ ನಿಯೋಜನೆಯ ಬಗ್ಗೆ ಬಿಜೆಪಿ ಶಾಸಕರ ವಿರೋಧಕ್ಕೆ ಸಂಬ0ಧಿಸಿದA0ತೆ ಪ್ರತಿಕ್ರಿಯಿಸಿದ ಅವರು, ಕೋಮು ಪ್ರಚೋದನೆ ಮಾಡುವುದೂ ಅವರೇ, ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುವುದು ಕೂಡ ಅವರೇ. ಈಗ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮನೋಭಾವನೆಯ ಬಿಜೆಪಿ ಶಾಸಕರನ್ನು ಉಡುಪಿ ಜನರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವರ್ಷ ವಾಡಿಕೆಗಿಂರ ಹೆಚ್ಚಿನ ಮಳೆಯಾಗುವ ಲಕ್ಷಣಗಳು ಜಾಸ್ತಿ ಇವೆ. ಮಳೆ ಅವಾಂತರವನ್ನು ತಪ್ಪಿಸಲು ಮಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಹಿಂದಿನ ವರ್ಷಗಳಿಗೆ ಹೊಲೀಸಿದರೇ ಈ ಬಾರಿ ಮಳೆ ಎದುರಿಸಲಿ ಸರ್ವಸನ್ನದ್ದರಾಗಿದ್ದೇವೆ. ಯಾವುದೇ ಪರಿಸ್ಥಿತಿಯಲ್ಲೂ ನಾವು ಸಿದ್ಧರಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!