spot_img
Monday, March 16, 2026
spot_img

ಕಾಂಗ್ರೆಸ್ ಸರ್ಕಾರದ ಲಂಚ ಪೀಡನೆಯ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ : ಬಿ.ವೈ ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) : ‘ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರ, ಲಂಚಗುಳಿತನದಿ0ದ ಗಬ್ಬುನಾರುತ್ತಿದೆ’ ಎನ್ನುವುದನ್ನು ಕಾಂಗ್ರೆಸ್ ಸಚಿವರು, ಶಾಸಕರೇ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ. ಸ್ವತಃ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯಲ್ಲಿನ ಲಂಚಾವತಾರದ ಸ್ಥಿತಿ ಕಂಡು ಹತಾಶೆಗೊಂಡಿದ್ದಾರೆ. ಕಚೇರಿಗಳಲ್ಲಿ ಲಂಚದ ದರ ಪಟ್ಟಿಗಳನ್ನು ಲಗತ್ತಿಸಿಬಿಡಿ…..”ಎಂದು ತಮ್ಮ ಅಸಹಾಯಕ ಪರಿಸ್ಥಿತಿಯ ವಸ್ತು ಸ್ಥಿತಿ ಚಿತ್ರಣವನ್ನು ತೆರೆದಿಟ್ಟು ಅಧಿಕಾರಿ, ಸಿಬ್ಬಂದಿಗಳ ಮೇಲೆ ಹರಿಹಾಯ್ದಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪತ್ರಿಕಾ ವರದಿಗಳನ್ನು ಉಲ್ಲೇಖಿಸಿಸಿ ರಾಜ್ಯ ಕಾಂಗ್ರೆಸ್ ವಿರುದ್ಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟೀಕಿಸಿದ ವಿಜಯೇಂದ್ರ, ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿರುವುದರ ವಿವರ ನೀಡಿದ್ದಾರೆ. ವಸತಿ ಸಚಿವರ ಆಪ್ತ ಕಾರ್ಯದರ್ಶಿಯೊಂದಿಗೆ ನಡೆಸಿರುವ ಸಂಭಾಷಣೆಯ ಆಡಿಯೋ ತುಣುಕುಗಳು ಮಾಧ್ಯಮಗಳನ್ನು ಸೇರಿದೆ. ರಾಜ್ಯ ಸರ್ಕಾರದ ಆಡಳಿತದಲ್ಲಿ ಮಂತ್ರಿ, ಶಾಸಕರುಗಳ ಪರಿಸ್ಥಿತಿಯೇ ಈ ಪರಿಯಾದರೆ, ಇನ್ನು ಜನಸಾಮಾನ್ಯರ ಸ್ಥಿತಿ ಕಲ್ಪನಾತೀತವಾಗಿದೆ ಎಂದು ಟೀಕಿಸಿದ್ದಾರೆ.

ಖಾತೆ, ಕಂದಾಯ, ಪಹಣಿಯಿಂದಿಡಿದು ಪ್ರತಿಯೊಂದು ಕೆಲಸಕ್ಕೂ ಇಂತಿಷ್ಟು ಲಂಚ ಕೊಟ್ಟೇ ಜನರು ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಈ ಪರಿಸ್ಥಿತಿ ಯಾವುದೇ ಇಲಾಖೆ ಹೊರತಾಗಿಲ್ಲ, ಮುಖ್ಯಮಂತ್ರಿಗಳ ಕಾರ್ಯಾಲಯ,ಸಚಿವಾಲಯಗಳಿಂದಲೇ ಲಂಚಗುಳಿತನ, ಪರ್ಸೆಂಟೇಜ್ ವ್ಯವಹಾರ ಎಲ್ಲೆ ಮೀರಿದೆ ಎಂದು ಕಾಂಗ್ರೆಸ್ಸಿಗರು ಹೇಳತೊಡಗಿದ್ದಾರೆ. ಒಂದು ಕಡೆ ಬೆಲೆ ಏರಿಕೆಯ ಸಂಕಟ, ಮತ್ತೊಂದು ಕಡೆ ಲಂಚ, ವಸೂಲಿ, ಲೂಟಿಕೋರತನದ ಹಾವಳಿಯಿಂದ ಜನ ಹಾಗೂ ಕರ್ನಾಟಕ ತತ್ತರಿಸುತ್ತಿದೆ, ಸಾಮಾನ್ಯರು ಹಾಗೂ ಬಡಜನರ ಗೋಳು ಹೇಳತೀರದಾಗಿದೆ. ಪಂಚ ಭಾಗ್ಯಗಳನ್ನು ಮುಂದಿಟ್ಟುಕೊ0ಡು ತಮ್ಮ ಹುಳುಕುಗಳನ್ನೆಲ್ಲ ಮುಚ್ಚಿಕೊಳ್ಳಲು ಸಿದ್ದರಾಮಯ್ಯನವರ ಸರ್ಕಾರ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂದಿದ್ದಾರೆ.

ಕಾನೂನು, ಸುವ್ಯವಸ್ಥೆ, ಆರ್ಥಿಕ ಸ್ಥಿತಿ, ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿದೆ, ಇಂತಹ ಜನದ್ರೋಹಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಗ್ಗೆ ಜನ ಹಾದಿ -ಬೀದಿಗಳಲ್ಲಿ ಶಪಿಸುತ್ತಿದ್ದಾರೆ. ಸದ್ಯದಲ್ಲೇ ರಾಜ್ಯ ಬಿಜೆಪಿ ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ, ಲಂಚಪೀಡನೆಯ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

https://x.com/BYVijayendra/status/1935983916571410597

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!