spot_img
Monday, March 16, 2026
spot_img

ದ.ಕ. – ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಗಳ ಮುಂದೆ ಬಿಜೆಪಿ ಧರಣಿ ಹಾಸ್ಯಾಸ್ಪದ : ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ

ಜನಪ್ರತಿನಿಧಿ (ಕುಂದಾಪುರ/ಉಡುಪಿ) : ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಕ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಗಳ ಮುಂದೆ ಜೂನ್ 23 ರಂದು ಬಿಜೆಪಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಹಾಸ್ಯಾಸ್ಪದ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಹೇಳಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಸುತ್ತೋಲೆ ಮತ್ತು ಆದೇಶದ ಮೂಲಕ ತಂದಿರುವ ಜನವಿರೋಧಿ ತಿರ್ಮಾನದ ವಿರುದ್ಧ ಈಗ ಬಿಜೆಪಿಯವರೇ ಪ್ರತಿಭಟಿಸುತ್ತಿರುವುದು ಎಷ್ಟು ಸರಿ ಎಂದು ಬಿಜೆಪಿಯವರು ಉತ್ತರಿಸಬೇಕಾಗಿದೆ. 9 / 11 ಸಮಸ್ಯೆಯ ಸುತ್ತೋಲೆ ಜಾರಿಗೊಳಿಸಿರುವುದು ಬಿಜೆಪಿ ಸರಕಾರದ ಅವಧಿಯಲ್ಲಿ. 50, 53 ಮತ್ತು 57 ರ ಅರ್ಜಿಗಳನ್ನು ತಿರಸ್ಕರಿಸುವಂತೆ ಸುತ್ತೋಲೆ ಹೊರಡಿಸಿರುವುದು ಬಿಜೆಪಿ ಸರಕಾರದ ಅವಧಿಯಲ್ಲಿ. ವ್ರದ್ಧಾಪ್ಯ ವೇತನ , ಸಂದ್ಯಾ ಸುರಕ್ಷಾ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿ ಸರಕಾರಕ್ಕೆ ಆದ್ಯಾಪಿಸುವ ಆದೇಶ ನೀಡಿರುವುದು ಬಿಜೆಪಿ ಸರಕಾರದ ಅವಧಿಯಲ್ಲಿ. ವಿದ್ಯುತ್ ದರ ಹೆಚ್ಚಳ ಮಾಡಿರುವುದು ಶ್ರೀ ಸುನೀಲ್ ಕುಮಾರ್ ಇಂಧನ ಸಚಿವರಾಗಿರುವ ಸಂದರ್ಭದಲ್ಲಿ ಎಂದು ಅವರು ಅವರ ಸುತ್ತೋಲೆ, ಆದೇಶದ ಪ್ರತಿ ಹಾಗೂ ಮಾಜಿ ಸಚಿವ ಸುನೀಲ್ ಕುಮಾರ್ ಅವರ ಹೇಳಿಕೆಯ ದಾಖಲೆಯ ಸಮೇತ ಬಿಜೆಪಿಯವರಿಗೆ ತಿಳಿಸಿಕೊಟ್ಟಿದ್ದಾರೆ.

ಪ್ರತಿಭಟನೆಯ 4 ವಿಷಯಗಳಲ್ಲಿ ಶ್ರೀ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದು ಸತ್ಯ ಸಂಗತಿ. 4 ವಿಷಯಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಸರಕಾರದ ಮಟ್ಟದಲ್ಲಿ ಮಾತುಕತೆ ನೆಡೆಸಿ ಸಮಸ್ಯೆ ಬಗೆಹರಿಸಬೇಕು. ತಮ್ಮ ಸರಕಾರದ ಅವಧಿಯಲ್ಲಾದ ತಪ್ಪನ್ನು ಮರೆಮಾಚಲು ಪ್ರತಿಭಟನೆ ಮಾಡಲು ಹೊರಟಿರುವುದು ಸರಿಯಾವ ಕ್ರಮವಲ್ಲ. ಜಿಲ್ಲೆಯ ಜನರಿಗೆ ತೊಂದರೆ ವಿಚಾರದಲ್ಲಿ ರಾಜಕೀಯ ಮಾಡದೇ ಸರಕಾರದ ಮಟ್ಟದಲ್ಲಿ ಪಕ್ಷಾತೀತವಾಗಿ ಸರಿಪಡಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!