spot_img
Monday, March 16, 2026
spot_img

ಮರು ಜಾತಿಗಣತಿಗೆ ಶಿಕ್ಷಕರ ಬಳಕೆ ಇಲ್ಲ : ಮಧು ಬಂಗಾರಪ್ಪ

ಜನಪ್ರತಿನಿಧಿ (ಶಿವಮೊಗ್ಗ) : ರಾಜ್ಯ ಸರ್ಕಾರಿ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ಸರ್ಕಾರಿ ಶಾಲೆ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ. ಬದಲಿಗೆ ಗಣತಿಯ ಜವಾಬ್ದಾರಿ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಆಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಮೀಕ್ಷೆ ಕಾರ್ಯಕ್ಕೆ ಶಿಕ್ಷರನ್ನು ನಿಯೋಜಿಸಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಗಳಿಗೆ ಪಾಠ ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನನು ಈಗಾಗಲೇ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದೇವೆ. ಹೀಗಾಗಿ ಶಿಕ್ಷಕರ ಬಳಕೆ ಮಾಡುತ್ತಿಲ್ಲ ಎಂದು ಇಂದು(ಶನಿವಾರ) ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಜನಾಭಿಪ್ರಾಯದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಸಮೀಕ್ಷೆಗೆ ಮುಂದಾಗಿದೆ. ಬಿಜೆಪಿ ರಾಜಕೀಯ ಲಾಭದ ಆಶಯದೊಂದಿಗೆ ಈ ಸಮೀಕ್ಷೆ ನಡೆಸಲಿದೆ. ಆದರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಸಂವಿಧಾನದತ್ತ ಅವಕಾಶಗಳು ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ದೊರಕಲಿ ಎಂಬ ಆಶಯದೊಂದಿಗೆ ಮತ್ತೊಮ್ಮೆ ಜಾತಿಗಣತಿಗೆ ಮುಂದಾಗಿದೆ. ಹೀಗಾಗಿ ರಾಜ್ಯದ ಜಾತಿಗಣತಿಯೆ ಹೆಚ್ಚು ನಿಖರ, ಸ್ಪಷ್ಟ ಹಾಗೂ ವಿಶ್ವಾಸಾರ್ಹ ಎಂದು ಹೇಳಿದರು.

ವರದಿ ಬೇಗ ಕೊಡಿ : ಇದೇ ವೇಳೆ ಶಿವಮೊಗ್ಗದಲ್ಲಿ ‘ಸಂವಿಧಾನ ಓದು ಶಿಬಿರ’ದ ಉದ್ಘಾಟನೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಆಸ್ ಅವರೊಂದಿಗೆ ವೇದಿಕೆ ಹಂಚಿಕೊAಡಿದ್ದ ಸಚಿವ ಮಧು ಬಂಗಾರಪ್ಪ, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸ್ಸುಗಳ ವರದಿಯನ್ನು ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!