spot_img
Monday, March 16, 2026
spot_img

ಕುಂದಾಪುರ ಬಿಜೆಪಿ ಮಂಡಲ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರದ ಕುಂದೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾದ 11ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿಕಸಿತ ಭಾರತ ಸಂಕಲ್ಪದ ಜಿಲ್ಲಾ ಸಂಚಾಲಕರಾದ ರಾಜೇಶ್ ಕಾವೇರಿಯವರು ವಿಶ್ವ ಯೋಗ ಪರಿಸರ ದಿನಾಚರಣೆ ಅಂಗವಾಗಿ ಗಿಡಕ್ಕೆ ನೀರು ಹಾಕುವುದರ ಮೂಲಕ ವಿಶ್ವ ಯೋಗ ದಿನಾಚರಣೆ ಉದ್ಘಾಟಿಸಿ ಯೋಗವು ಜನರಿಗೆ ಆಂತರಿಕ ಶಕ್ತಿಯ ಮೂಲವಾಗಿದೆ ಮತ್ತು ನಕರಾತ್ಮಕತೆಯನ್ನು ಸೃಜನಶೀಲತೆಗೆ ಪರಿವರ್ತಿಸುವ ಮಾಧ್ಯಮವಾಗಿದೆ ಎಂದು ತಿಳಿಸಿದರು.

ವಿಕಸಿತ ಭಾರತ ಸಂಕಲ್ಪದ ಕಾರ್ಯಕ್ರಮದ ಕುಂದಾಪುರ ಮಂಡಲದ ಸಂಚಾಲಕರಾದ ಸುನಿಲ್ ಶೆಟ್ಟಿ ಹೇರಿಕುದ್ರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿಯನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ರಾಜ್ಯ ಸಮಿತಿಯ ಸದಸ್ಯರು ಹಾಗೂ ಶ್ರೀ ಪತಂಜಲಿ ಯೋಗ ಸಮಿತಿಯ ಮುಖ್ಯ ಶಿಕ್ಷಕರಾದ ವಿವೇಕ್ ಪೈ ನೇತೃತ್ವದಲ್ಲಿ ಯೋಗಪಟುಗಳಿಗೆ ಯೋಗ ಅಭ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್, ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೋಹಿಣಿ ಪೈ, ಹಾಗೂ ಯೋಗ ಅಭಿಮಾನಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!