spot_img
Tuesday, March 17, 2026
spot_img

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ| ಕಾಂಗ್ರೆಸ್ ಪಕ್ಷ ಅಧಿಕ್ಕಾರಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೈಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು.

ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು ಈ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಮಾಡಿದ್ದರೆ ೨೦೦೪ರಲ್ಲೆ ಅಧಿಕಾರ ಹಿಡಿಯಬಹುದಿತ್ತು. ಜವಹರಲಾಲ್ ನೆಹರು ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಬೇಕು, ನಾನು ಕೂಡ ಬೂತ್ ಏಜೆಂಟ್, ಕೌಟಿಂಗ್ ಏಜೆಂಟ್ ಆಗಿ ಕೆಲಸ ಮಾಡಿರುವೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಟಿಕೆಟ್ ನೀಡಲಾಯಿತು. ಇದೀಗ ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬಳೇ ಮಹಿಳಾ ಮಂತ್ರಿಯಾಗಿರುವೆ. ನನಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಶುಭ ಹಾರೈಸಿದರು.

ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಕಳೆದ ಚುನಾವಣೆಯಲ್ಲಿ ಸೋತರೂ ಕಾರ್ಯಕರ್ತರ, ಕ್ಷೇತ್ರದ ಒಡನಾಟ ಬಿಟ್ಟಿಲ್ಲ. ಜನರ ಕಷ್ಟ ಸುಖದ ಬಗ್ಗೆ ಸದಾ ಯೋಚನೆ ಮಾಡುತ್ತಾರೆ ಎಂದರು.

ನಿಕಟಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ ಅವರು ನೂತನ ಅಧ್ಯಕ್ಷರಾದ ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ, ಉದಯಶೆಟ್ಟಿ ಮುನಿಯಾಲು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಉಡುಪಿ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಪ್ರಸನ್ನ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅರವಿಂದ್ ಪೂಜಾರಿ, ಬೈಂದೂರ್ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಭರತ್ ದೇವಾಡಿಗ ಹಾಗೂ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷರಾದ ಶೇಖರ್ ಪೂಜಾರಿ, ಸೇರಿದಂತೆ ಅನೇಕ ಪಕ್ಷದ ಮುಖಂಡರುಗಳು ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!