spot_img
Wednesday, March 18, 2026
spot_img

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ | ಭಾರತೀಯ ಚುನಾವಣಾ ಆಯೋಗ ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ : ರಾಹುಲ್ ಗಾಂಧಿ

ಜನಪ್ರತಿನಿಧಿ (ನವದೆಹಲಿ) : ಭಾರತೀಯ ಚುನಾವಣಾ ಆಯೋಗ ಪಾರದರ್ಶಕತೆ ಒದಗಿಸಬೇಕಾದಾಗ ಸಂದರ್ಭದಲ್ಲಿ “ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಫಲಿತಾಂಶ ಪ್ರಕಟವಾದ 45 ದಿನಗಳ ಬಳಿಕ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್ ಕಾಸ್ಟಿಂಗ್ ಮತ್ತು ವೀಡಿಯೊ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ಬಳಿಕ ಅವರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.

“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. 1 ವರ್ಷ ಅಲ್ಲ. ಉತ್ತರಗಳನ್ನು ನೀಡಬೇಕಾದವರು – ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ ಎಂದು ಗಾಂಧಿ ಆರೋಪಿಸಿದ್ದಾರೆ.

ಇದು ‘ಮ್ಯಾಚ್ ಫಿಕ್ಸಿಂಗ್’ ಎಂಬುದು ಸ್ಪಷ್ಟವಾಗಿದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ” ಎಂದು ಅವರು ಹೇಳಿದ್ದಾರೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ ಎಂದು ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವೀಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಲು ಗಾಂಧಿ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.

https://x.com/RahulGandhi/status/1936327577246855210

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!