spot_img
Monday, March 16, 2026
spot_img

ಆತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪುರ: ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ಭಾರತಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು.

ಕ್ರೀಡಾಭಾರತಿ ಮಂಗಳೂರು ವಿಭಾಗದ ಸಂಯೋಜಕರಾದ ಲಿಂಗಯ್ಯ ಉಪ್ಪುಂದ ಯೋಗಾಸನ ತರಬೇತಿ ನೀಡಿದರು. ಮುಖ್ಯ ಸಂಪನ್ಮೂಲ ವ್ಯಕ್ತಿ, ರಾಷ್ಟ್ರೀಯ ಸ್ವಯಂ ಸೇವಕದ ಉಡುಪಿ ಜಿಲ್ಲಾ ಸಹಕಾರ್ಯವಾಹ ಪ್ರಶಾಂತ್ ಅರೆಶಿರೂರು ವಿದ್ಯಾರ್ಥಿಗಳಿಗೆ ಯೋಗ ಮತ್ತು ಸಂಸ್ಕಾರದ ಕುರಿತು ಉಪನ್ಯಾಸ ನೀಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೈಂದೂರು ತಾಲೂಕು ಕಾರ್ಯವಾಹ ಸಂದೀಪ್ ಕಂಚಿಕಾನ್ ಹಾಗೂ ಕ್ರೀಡಾ ಭಾರತಿಯ ಉಡುಪಿ ಜಿಲ್ಲೆ ಸದಸ್ಯರಾದ ಕೇಶವ್ ನಾಗೂರು ಯೋಗಾಸನ ತರಬೇತಿಯಲ್ಲಿ ಸಹಕರಿಸಿದರು.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಸ್ವಾಗತಿಸಿದರು. ಗಮನ್ಯಾ ಶೆಟ್ಟಿ, ಅಂಕಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದೀಪ್ತಿ ಶೆಟ್ಟಿ ವಂದಿಸಿದರು. ಅನುಜ್ಞಾ, ಮನಸ್ವಿ, ತ್ರಿಶಾ, ಪ್ರೇಕ್ಷಿತಾ ಪ್ರಾರ್ಥನೆ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!