spot_img
Monday, March 16, 2026
spot_img

ಸುನೀಲ್ ಕುಮಾರ್ ಕಾರ್ಕಳ ತಮ್ಮನ್ನು ತಾವು ಸರ್ವಜ್ಞ ಎಂದುಕೊಂಡಿದ್ದಾರೆ, ನೈತಿಕತೆ ಬಗ್ಗೆ ಅವರಿಂದ ಕಲಿಯಬೇಕೆಂದಿಲ್ಲ : ಹೆಬ್ಬಾಳ್ಕರ್

ಜನಪ್ರತಿನಿಧಿ (ಉಡುಪಿ) : ಶಾಸಕ ಸುನೀಲ್ ಕುಮಾರ್ ಕಾರ್ಕಳ ಅವರಿಂದ ನೈತಿಕ ಪಾಠ ಕಲಿಯಬೇಕೆಂದಿಲ್ಲ. ನೈತಿಕತೆ ಎಂದರೇನು ? ನೈತಿಕತೆಯ ಬಗ್ಗೆ ಮೊದಲು ಅವರು ತಿಳಿದುಕೊಳ್ಳಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ಹೊರ ಹಾಕಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರ ಬಗ್ಗೆ ಮಾತನಾಡುವುದಕ್ಕೆ ನೈತಿಕತೆ ಸಚಿವೆಗೆ ಇಲ್ಲ ಎಂಬ ಶಾಸಕ ಸುನೀಲ್ ಕುಮಾರ್ ಕಾರ್ಕಳ ಅವರ ಆರೋಪಕ್ಕೆ ಇಂದು(ಶನಿವಾರ) ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಸುನೀಲ್ ಕುಮಾರ್ ಬಹಳ ಚೆಂದ ಮಾತುಗಾರ, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ0ದು ಅವರು ತಿವಿದಿದ್ದಾರೆ.

ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69000 ಅಂಗನವಾಡಿ ಕಟ್ಟಡಗಳು ಇವೆ, 12000 ಕಟ್ಟಡ ಬಾಡಿಗೆಯಲ್ಲಿವೆ. ನನ್ನ ಇಲಾಖೆ ಬಗ್ಗೆ ಕೇಳ್ತೀರಾ ? ಬನ್ನಿ ನಿಮಗೆ ಎಲ್ಲಾ ಡೀಟೇಲ್ಸ್ ಕೊಡುತ್ತೇನೆ ಎಂದು ಹರಿಹಾಯ್ದಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮುಂದೆ ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಂgತರಿಕ ಕಚ್ಚಾಟದಿಂದ ಬಿಜೆಪಿ ಕಾರ್ಯಕರ್ತರು ಬೇಸತ್ತು ಹೋಗಿದ್ದಾರೆ. ಅದನ್ನು ಮರೆ ಮಾಚಲು ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆ ಸಂವಿಧಾನ ಬದ್ಧವಾದ ಹಕ್ಕು, ವಿರೋಧ ಪಕ್ಷಕ್ಕೆ ಮಾಡಲು ಬೇರೆ ಕೆಲಸ ಇಲ್ಲ. ಪ್ರತಿಭಟನೆ ಮಾಡಲಿ. ಜಿಎಸ್.ಟಿ ತರಲು ಆಗಿಲ್ಲ ಅದಕ್ಕೆ ಪ್ರತಿಭಟನೆ ಮಾಡುತ್ತಾರಾ ? ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅದರ ವಿರುದ್ಧ ಪ್ರತಿಭಟನೆ ಮಾಡುತ್ತಾರಾ ? ಅಸಮರ್ಥ ಸಂಸದರ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಯಾರನ್ನೂ ಗುರಿಯಾಗಿಸುತ್ತಿಲ್ಲ : ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಗೆ ಬಾಗಲಕೋಟೆ ಬರದಂತೆ ಮೂರು ತಿಂಗಳು ನಿಷೇಧ ಹೇರಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ವಾಗ್ಮಿ, ಭಾಷಣಕಾರರನ್ನು ನಾವು ಗುರಿಯಾಗಿಸುತ್ತಿಲ್ಲ., ಭಾಷಣ ವಿಷಯಾಧಾರಿತವಾಗಿರಬೇಕು. ವಿಷಯಾಂತರ ಆಗಬಾರದು ಎಂದು ಅವರು ಹೇಳಿದರು.
ಸಮಾಜದ ಕೋಮು ಸೌಹಾರ್ದತೆ ಕೆಡಿಸಬಾರದು. ವಿಷ ಬೀಜ ಬಿತ್ತಿ ಸಮಾಜ ಒಡೆಯಬಾರದು. ಅಂತವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಾಂತ್ ಶೆಟ್ಟಿ ಹಿಂದಿನ ಭಾಷಣಗಳನ್ನು ತೆಗದು ನೋಡಿ ಆಗ ಎಲ್ಲಾ ವಿಚಾರ ಅರಿವಾಗುತ್ತದೆ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!