spot_img
Monday, March 16, 2026
spot_img

ಕೋಟೇಶ್ವರ ಸೇವಾ ಟ್ರಸ್ಟ್ : ಜೂನ್ 24ರಂದು ಟ್ರಸ್ಟ್ ಕಚೇರಿ, ಸ್ವಚ್ಛ ಭಾರತ್ ಅಭಿಯಾನದ ಯೋಜನೆ, ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪ ಉದ್ಘಾಟನೆ

ಕುಂದಾಪುರ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಿಷ್ಟು ಸಮಾಜ ಸೇವೆಯನ್ನು ಸಲ್ಲಿಸುವ ಸಲುವಾಗಿ ಕೆಲವು ಸಮಾನ ಮನಸ್ಕರು ಜೊತೆಗೂಡಿ ಕೋಟೇಶ್ವರ ಸೇವಾ ಟ್ರಸ್ಟ್ ನ್ನು ರಚಿಸಲಾಗಿದ್ದು, ಟ್ರಸ್ಟ್ ನೇತೃತ್ವದಲ್ಲಿ ಜೂನ್ 24ರಂದು ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಮತ್ತು ಸ್ವಚ್ಛ ಭಾರತ ಅಭಿಯಾನ ಯೋಜನೆಯ ಲೋಕಾರ್ಪಣಾ ಕಾರ್ಯಕ್ರಮದೊಂದಿಗೆ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪವನ್ನು ಉದ್ಘಾಟಿಸಿ ಹಸ್ತಾಂತರಿಸುವ ಕಾರ್ಯಕ್ರಮಗಳು ನಡೆಯಲಿದೆ ಎಂದು ಕೋಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಗೋಪಾಡಿ ಶ್ರೀನಿವಾಸ ರಾವ್ ಹೇಳಿದರು.

ಅವರು ಸೋಮವಾರ ಕುಂದಾಪುರದ ಕೇಕ್‍ ವಾಲಾದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಜೂನ್ 24ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನೂತನವಾಗಿ ನಿರ್ಮಿಸಿರುವ “ಕೋಟೇಶ್ವರ ಸೇವಾ ಟ್ರಸ್ಟ್” ನ ಕಚೇರಿಯಲ್ಲಿ ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಆಶೀರ್ವಚನ ನಡೆಯಲಿದೆ ಎಂದರು.

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಮೂಲ ಸೌಕರ್ಯ ಒದಗಿಸಲು ಹಲವು ವರ್ಷಗಳಿಂದ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಮಿತ್ರದಳ ಕೋಟೇಶ್ವರ ಇತ್ಯಾದಿ ಸಂಘಟನೆಗಳು ಪ್ರಯತ್ನ ಪಡುತ್ತಿದ್ದರು. ಜಾಗದ ಕೊರತೆಯಿಂದ ಈ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗಿರಲಿಲ್ಲ. ಇದೀಗ “ಕೋಟೇಶ್ವರ ಸೇವಾ ಟ್ರಸ್ಟ್” ನೇತೃತ್ವದಲ್ಲಿ ಸಮಾನ ಮನಸ್ಕ ಟ್ರಸ್ಟಿಗಳನ್ನಾಗಿ ಸೇರಿಸಿಕೊಂಡು ಈ ಯೋಜನೆಯು ಸಾಕಾರವಾಗುತ್ತಿದೆ ಎಂದರು,

ಕೋಟೇಶ್ವರ ಸೇವಾ ಟ್ರಸ್ಟ್ ನೂತನ ಕಚೇರಿಯನ್ನು ಹಾಗೂ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಥಮ ಆದ್ಯತೆಯಲ್ಲಿ ನೂತನವಾಗಿ ನಿರ್ಮಿಸಿರುವ ಯೋಜನೆಯನ್ನು ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರು ರಾಮಲಿಂಗ ರೆಡ್ಡಿಯವರು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಕೋಟೇಶ್ವರ ವಾದಿರಾಜ ಕಲ್ಯಾಣ ಮಂಟಪದಲ್ಲಿ ಜರುಗುವ ಸಭಾ ಕಾರ್ಯಕ್ರಮ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಸಮಾಜ ಸೇವಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಪ್ರಕಾಶ್ ಜಿ ಪೂಜಾರಿ, ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಮಾರ್ಕೊಡು. ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಪ್ರಸನ್ನಕುಮಾರ್ ಐತಾಳ್, ಟ್ರಸ್ಟಿನ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ರಂಗ ಮಂಟಪ ಉದ್ಘಾಟನೆ: ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರಾಥಮಿಕ ವಿಭಾಗ ಶತಮಾನೋತ್ಸವ ಸಮಿತಿ ಇವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ವಿದ್ಯಾರ್ಥಿಗಳ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಹಿತ ದೃಷ್ಟಿಯಿಂದ ಜಂಟಿಯಾಗಿ ನಿರ್ಮಿಸಿದ ಸುಸಜ್ಜಿತವಾದ ಮತ್ತು ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪವನ್ನು ಮಧ್ಯಾಹ್ನ 2 ಗಂಟೆಗೆ ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹಾಗೂ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಉದ್ಘಾಟಿಸಿ, ಹಸ್ತಾಂತರಿಸುವ ಕಾರ್ಯಕ್ರಮ ಜರುಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಆಶೀರ್ವಚನ ಹಾಗೂ ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ಸರಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಇವರ ಘನ ಉಪಸ್ಥಿತಿಯಲ್ಲಿ ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಗೋಪಾಡಿ ಸಂಸ್ಥಾಪಕರಾದ ಗೋಪಾಡಿ ಶ್ರೀನಿವಾಸರಾವ್, ಅಧ್ಯಕ್ಷರಾದ ಶ್ರೀಮತಿ ರುಕ್ಮಿಣಿ ಜಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ವಿಠಲ ಕಾಮತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ ಉಡುಪ, ಭಾಗವಹಿಸಲಿದ್ದಾರೆ.

ಈ ರಂಗಮಂಟಪವನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಸುಸಜ್ಜಿತವಾದ ಗ್ರೀನ್ ರೂಮ್ ಹೊಂದಿದೆ. ಟ್ರಸ್ಟಿನಿಂದ ಮಾಡುವ ಎಲ್ಲಾ ಯೋಜನೆಗಳ ನಿರ್ವಹಣೆಯನ್ನು ೧೫ ವರ್ಷಗಳ ಕಾಲ ಟ್ರಸ್ಟ್ ನಿರ್ವಹಿಸಲಿದೆ. ಈ ಬಗ್ಗೆ ಮೊದಲೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

ಈ ರಂಗಮಂಟವನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಸುಸಜ್ಜಿತವಾದ ಗ್ರೀನ್ ರೂಮ್ ಹೊಂದಿದೆ. ಟ್ರಸ್ಟಿನಿಂದ ಮಾಡುವ ಎಲ್ಲಾ ಯೋಜನೆಗಳ ನಿರ್ವಹಣೆಯನ್ನು 15 ವರ್ಷಗಳ ಕಾಲ ಟ್ರಸ್ಟ್ ನಿರ್ವಹಿಸಲಿದೆ. ಈ ಬಗ್ಗೆ ಮೊದಲೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪದ ಉದ್ಘಾಟನೆಯ ಬಳಿಕ ಸಂಜೆ 5 ಗಂಟೆಗೆ ಭಜನಾ ಕಾರ್ಯಕ್ರಮ ಹಾಗೂ ನೃತ್ಯ ಸಿಂಚನ ಕುಂದಾಪುರ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ರಾಜಗೋಪಾಲ ಆಚಾರ್, ಕೋಟೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ ಬೆಟ್ಟಿನ್, ಟ್ರಸ್ಟಿನ ಸದಸ್ಯರಾದ ಕೃಷ್ಣದೇವ ಕಾರಂತ, ಪ್ರಶಾಂತ್ ಕಿಣಿ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!