spot_img
Monday, March 16, 2026
spot_img

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿರುವ ವ್ಯಕ್ತಿಯೊಬ್ಬನಿಂದ ತಪ್ಪೊಪ್ಪಿಗೆಗೆ ನಿರ್ಧಾರ ? | ದ.ಕ ಜಿಲ್ಲೆಯ ಎಸ್.ಪಿ ಏನಂದ್ರು ?

ಜನಪ್ರತಿನಿಧಿ (ಬೆಳ್ತಂಗಡಿ) : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವು ಅಪರಾಧ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ತಮ್ಮಲ್ಲಿ ಹೇಳಿರುವುದಾಗಿ ವಕೀಲರಿಬ್ಬರ ಹೆಸರಿನಲ್ಲಿನರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸರು ಈ ಪತ್ರದ ನೈಜತೆತಯನ್ನು ಪರಿಶೀಲಿಸಲು ಅದರಲ್ಲಿ ಉಲ್ಲೇಖಿಸಿದ್ದ ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಹಾಗೂ ಸಚಿನ್ ಎಸ್ ದೇಶಪಾಂಡೆ ಎಂಬವರನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದ್ದಾರೆ. ವ್ಯಕ್ತಿಯೋರ್ವ ತಮ್ಮ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿಯೂ, ತಾನು ಧರ್ಮಸ್ಥಳ ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿ ನೀಡಲು ಸಿದ್ಧನಿರುವುದಾಗಿ ತಿಳಿಸಿದ್ದಾನೆ ಎಂದು ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾತ್ರವಲ್ಲದೇ ಆ ವ್ಯಕ್ತಿಗೆ ಅಗತ್ಯ ಕಾನೂನು ಸುರಕ್ಷತೆಯನ್ನು ಕಲ್ಪಿಸಿದ ಬಳಿಕ ಹಾಜರುಪಡಿಸುವುದಾಗಿ ವಕೀಲರು ಹೇಳಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಸಂಬ0ಧಪಟ್ಟ ಆ ವ್ಯಕ್ತ ಠಾಣೆಗೆ ಹಾಜರಾಗಿ ಮಾಹಿತಿ ನೀಡಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಆ ಪತ್ರದಲ್ಲಿ ಏನಿದೆ ?
ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎನ್ನುವವರ ಹೆಸರಿನಲ್ಲಿರುವ ಪತ್ರದಲ್ಲಿ, “ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿ ಹಾಕುವ ಸಲುವಾಗಿ, ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು ತಾನು ಹೂತು ಹಾಕಿರುವ ಮೃತ ದೇಹಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ. ಇತ್ತೀಚೆಗೆ ಹೊರತೆಗೆದ ಕಳೆಬರವೊಂದನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

‘ಸಾರ್ವಜನಿಕರ ಮಾಹಿತಿಗಾಗಿ’ ಎಂದು ಬರೆಯಲಾಗಿರುವ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಹರಿದಾಡುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!