spot_img
Monday, March 16, 2026
spot_img

ಮುರುಡೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಜನಪ್ರತಿನಿಧಿ (ಭಟ್ಕಳ) : ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಮುರುಡೇಶ್ವರ ದೇವಾಲಯದಲ್ಲಿ ಅಧಿಕೃತವಾಗಿ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರು ಭಾರತೀಯ ಸಾಂಪ್ರದಾಯಿಕ ಉಡುಪು ಧರಿಸುವಂತೆ ಸೂಚಿಸಲಾಗಿದೆ.

ಹೊಸ ವಸ್ತ್ರ ಸಂಹಿತೆ ಪ್ರಕಾರ ಪುರುಷರು ಅಂಗಿ, ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು ಸೀರೆ, ಸಾಲ್ವರ್ -ಚೂಡಿದಾರ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ.

ದೇವಾಲಯದೊಳಗೆ ಪಾಶ್ಚಿಮಾತ್ಯ ಶೈಲಿಯ ಅಥವಾ ಕ್ಯಾಶುಯಲ್ ಉಡುಪುಗಳಿಗೆ ಅನುಮತಿ ನಿರಾಕರಿಸಲಾಗಿದೆ. ಹೊಸ ನಿಯಮವನ್ನು ಭಕ್ತರಿಗೆ ಗೆ ತಿಳಿಸಲು ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮುರುಡೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಕೆಲವು ಭಕ್ತರು ಅನುಚಿತ ಮತ್ತು ಬೇಕಾಬಿಟ್ಟಿ ವಸ್ತ್ರ ಧರಿಸಿ ಪ್ರವೇಶಿಸುತ್ತಿದ್ದರು ಎಂಬ ಆಕ್ಷೇಪಗಳು ಕೇಳಿಬಂದಿದ್ದವು.

ಈ ಕುರಿತು ಸ್ಥಳೀಯ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ದೇವಾಲಯದ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದವು. ಈ ಮನವಿಗಳನ್ನು ಪರಿಗಣಿಸಿ, ಆಡಳಿತ ಮಂಡಳಿಯು ಈಗ ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೊಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!