spot_img
Monday, March 16, 2026
spot_img

ಬ್ರಹ್ಮಾವರ ಬಂಟರ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ

ಬ್ರಹ್ಮಾವರ: ಬಂಟರ ಯಾನೆ ನಾಡವರ ಸಂಘ (ರಿ) ಬ್ರಹ್ಮಾವರ ಇದರ ವತಿಯಿಂದ ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ, ಪದವಿ ಪೂರ್ವ ಕಾಲೇಜಿಗೆ ದಾಖಲಾಗಿರುವ ಅರ್ಹ ಬಡ ವಿದ್ಯಾರ್ಥಿಗಳಿಗೆ 2 ವರ್ಷದ ಶುಲ್ಕದ ಬಾಬು ಒಟ್ಟು ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷರಾದ ಸುದರ್ಶನ ಹೆಗ್ಡೆಯವರು ವಿದ್ಯಾರ್ಥಿವೇತನವನ್ನು ವಿತರಿಸಿ, ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ನಡೆಸಿ ಜೀವನದಲ್ಲಿ ಯಶಸ್ಸು ಗಳಿಸುವಂತೆ ಕರೆ ನೀಡಿದರು.

ಬಂಟರ ಸಂಘದ ವಿದಾರ್ಥಿವೇತನ ಸಮಿತಿಯ ಸಂಚಾಲಕರಾದ ದಿನಕರ ಆರ್. ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತಾನಾಡಿ ವಿದ್ಯಾರ್ಥಿ ವೇತನಕ್ಕೆ ಸಹಕರಿಸಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಬಂಟರ ಮಹಿಳಾ ವಿಭಾಗದ ಅಧ್ಯಕ್ಷರಾದ ಕೆಂಜೂರು ಜಯಶ್ರೀ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ವಂದಿಸಿದರು. ಕೋಶಾಧಿಕಾರಿ ಅಶೋಕಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!