spot_img
Tuesday, March 17, 2026
spot_img

ಜನತಾ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಿರಿಮಂಜೇಶ್ವರ : ಜೂನ್ 21 ರಂದು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್
ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಆಚರಿಸಲಾಯಿತು.

ಜನತಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಕಾಲೇಜಿನ ರಾಷ್ಟ್ರಮಟ್ಟದ ಯೋಗಪಟು ನಿರೀಕ್ಷಾ ಹಾಗೂ ಸಾನಿಧ್ಯಾ ಎಸ್ ಮೊಗವೀರ ಮತ್ತು ವಂಶಿತ್ (೭ನೇ ತರಗತಿ) ಯೋಗ ನೃತ್ಯವನ್ನು ಪ್ರದರ್ಶಿಸಿದರು. ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ (ಪ್ರಥಮ ಪಿಯುಸಿ) ಅವರಿಂದ ಡ್ರಾಮಾ ಪ್ರದರ್ಶನ ನಡೆಯಿತು.

ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು ಯೋಗದ ಮಹತ್ವವನ್ನು ಸಾರುತ್ತ ಪ್ರತಿಯೊಬ್ಬರು ಯೋಗವನ್ನು ಕಲಿತು ಆರೋಗ್ಯಕರ ಜೀವನದ ಕಡೆಗೆ ಹೆಚ್ಚು ಹಾಕಬೇಕೆಂದರು.

ಈ ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯೋಗ ಶಿಕ್ಷಕಿಯಾದ ಅನ್ವಿತಾ ಸ್ವಾಗತಿಸಿ, ನಿರೂಪಿಸಿ, ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!