spot_img
Wednesday, March 18, 2026
spot_img

ನಮ್ಮ ಅಭಿವೃದ್ಧಿಯನ್ನು ಸಹಿಸದೆ ಬಿಜೆಪಿಯವರು ಸುಳ್ಳಿನ ಸರಮಾಲೆ ಬಿಡುತ್ತಾ ತಿರುಗುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ರಾಯಚೂರು) : ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ ₹936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ನಾವು ಮಾಡುತ್ತಿರುವ ಅಭಿವೃದ್ಧಿಯನ್ನು ಸಹಿಸದೆ ಸುಳ್ಳಿನ ಸರಮಾಲೆ ಬಿಡುತ್ತಾ ತಿರುಗುತ್ತಿದ್ದಾರೆ. ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಯಚೂರಿನಲ್ಲಿ ಇಂದು(ಸೋಮವಾರ) ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಇವತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾಗಿದ್ದು 371ಜೆ. ಇದನ್ನು ಜಾರಿಗೆ ತಂದಿದ್ದು ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರ ನೇತೃತ್ವದ ಹೋರಾಟ ಮತ್ತು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ. ಈ 371ಜೆ ಜಾರಿಗೊಳಿಸಲು ಬಿಜೆಪಿ ಸಂಪೂರ್ಣ ವಿರುದ್ಧವಿತ್ತು. ವಾಜಪೇಯಿ ಪ್ರಧಾನಿ ಆಗಿದ್ದಾಗ ಉಪಪ್ರಧಾನಿ ಅಡ್ವಾಣಿ ಅವರು 371ಜೆ ಜಾರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ ಎಂದು ಹೇಳಿದರು.

ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 13,500 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಇದನ್ನು ಖರ್ಚು ಮಾಡಿದ ಮೇಲೆ ಇನ್ನಷ್ಟು ಹೆಚ್ಚಿನ ಅನುದಾನ ಕೊಡುತ್ತೇವೆ. 371ಜೆ ಜಾರಿಯಾದ ಕಾರಣದಿಂದ ಈ ಭಾಗದ ಯುವಕ ಯುವತಿಯರು ಎಂಜಿನಿಯರ್, ವೈದ್ಯರು, ಎಸಿ, ಡಿಸಿ, ಪೊಲೀಸ್ ಅಧಿಕಾರಿಗಳಾಗುತ್ತಿದ್ದಾರೆ. ಇದು ನಮ್ಮ ಸರ್ಕಾರದ ಸಾಧನೆ. ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎನ್ನುವುದು ಐತಿಹಾಸಿಕ ಸತ್ಯ. ಕಲ್ಯಾಣ ಕರ್ನಾಟಕ ಸದಾ ನಮ್ಮ ಪಕ್ಷದ ಭದ್ರ ಕೋಟೆ. 15ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯವನ್ನು 16ನೇ ಹಣಕಾಸು ಆಯೋಗದಲ್ಲಾದರೂ ಸರಿಪಡಿಸಿ ಎಂದು ಕೇಳಲು ಇಂದು ದೆಹಲಿಗೆ ಹೋಗುತ್ತಿದ್ದೇನೆ. ಇದಕ್ಕಾಗಿ ಕೇಂದ್ರ ಹಣಕಾಸು ಸಚಿವರನ್ನೂ ಭೇಟಿ ಮಾಡುತ್ತಿದ್ದೇನೆ. ರಾಜ್ಯದ ಜನರಿಗೆ ಅವರ ನ್ಯಾಯಯುತ ಪಾಲು ಕೊಡಿಸುವುದು ನನ್ನ ಬದ್ಧತೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!