spot_img
Wednesday, March 18, 2026
spot_img

ಕಾಪು ಮುದ್ದಣ್ಣ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ಸಲ್ವಾಡಿ: ಉಚಿತ ನೋಟ್ ಪುಸ್ತಕ ಕೊಡುಗೆ

ಕುಂದಾಪುರ: ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಪು ಮುದ್ದಣ್ಣ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ (ರಿ) ಸಳ್ವಾಡಿ, ಕಾಳಾವರ ಇವರು ಉಚಿತ ನೋಟ್ಸ್ ಪುಸ್ತಕಗಳನ್ನು ನೀಡಿದರು.

ಟ್ರಸ್ಟಿನ ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು. ಇದೇ ಟ್ರಸ್ಟಿನಿಂದ ಈ ಹಿಂದೆ ಈ ಶಾಲೆಗೆ ನೀಡಿದ ೧೦ ಕಂಪ್ಯೂಟರ್ ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿರುವುದನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದೀಪ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಕಾರ್ಯಕ್ರಮಕ್ಕೆ ಉಡುಪಿ ಡಯಟ್ ಉಪನ್ಯಾಸಕಿ ಜ್ಯೋತಿ ಆಗಮಿಸಿ ದಾನಿಗಳ ಕೊಡುಗೆಯನ್ನು ಸ್ಮರಿಸಿ, ಇಲಾಖೆಯ ಪರವಾಗಿ ಅಭಿನಂದಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್ ಮತ್ತು ಉಮ್ಮೆ ಸಲ್ಮಾ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯ ವೆಂಕಟ ಸ್ವಾಗತಿಸಿದರು. ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಿಕ್ಷಕ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!