spot_img
Wednesday, March 18, 2026
spot_img

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ | ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಲಿ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

ಜನಪ್ರತಿನಿಧಿ (ಶಿವಮೊಗ್ಗ) : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಸ್ವಪಕ್ಷದವರ ಆರೋಪ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಒಬ್ಬರೇ ಶಾಸಕರು ಸ್ವಪಕ್ಷದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ 
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಖಾತೆಯ ಸಚಿವರು ರಾಜೀನಾಮೆ ನೀಡಲಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತಾಡಿದ ಅವರು ವಸತಿ ಯೋಜನೆ ಬಗ್ಗೆ ಆರೋಪ ಬಂದಿರುವುದನ್ನು ನೀವು ಕೇಳಿದ್ದೀರಿ. ಕಾಂಗ್ರೆಸ್‌ನ ಹಿರಿಯ ಸದಸ್ಯರೊಬ್ಬರು ಈ ಬಗ್ಗೆ ಧ್ವನಿಯೆತ್ತಿದ್ದಾರೆ. ಹೀಗಾಗಿ ಸಂಬ0ಧಪಟ್ಟ ಸಚಿವರು ತನಿಖೆಗೆ ಒಳಪಡ್ಬೇಕು ಎಂದಿದ್ದಾರೆ.

ಜಮೀರ್ ಖಾನ್ ರಾಜೀನಾಮೆ ನೀಡಲಿ 
ತನಿಖೆ ನಡೆದು, ಸತ್ಯಾಂಶ ಹೊರ ಬರುವವರೆಗೂ ಸಚಿವ ಜಮೀರ್ ಖಾನ್ ರಾಜೀನಾಮೆ ಕೊಡುವುದು ಉತ್ತಮ ಎಂದು ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಆರೋಪ ಬಂದಿದೆ ರಾಜೀನಾಮೆ ಕೊಡಲಿ, ತನಿಖೆ ಮುಗಿದ ನಂತರ ಬೇಕಾದ್ರೆ ಮತ್ತೆ ಮಂತ್ರಿ ಆಗಲಿ ಎಂದು ಸಾಗರದ ಶಾಸಕ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.

ಬೇರೆ ಬೇರೆ ಹಗರಣಗಳಲ್ಲೂ ಆರೋಪಗಳು ಕೇಳಿ ಬರ್ತಿದ್ದಂತೆ ಅನೇಕರು ರಾಜೀನಾಮೆ ಕೊಟ್ಟ ಉದಾಹರಣೆ ಕೂಡ ಇದೆ. ಅವರು ತಪ್ಪಿತಸ್ಥರಲ್ಲ ಎಂದ ತಕ್ಷಣ ಮತ್ತೆ ಅಧಿಕಾರ ತೆಗೆದುಕೊಳ್ಳುವ ಅವಕಾಶ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!