spot_img
Monday, March 16, 2026
spot_img

ಇಸ್ರೆಲ್ ಜೊತೆಗೆ ಯುದ್ಧ ವಿರಾಮಕ್ಕೆ ನಾವು ಒಪ್ಪಿಲ್ಲ : ಟ್ರಂಪ್ ಹೇಳಿಕೆ ಬೆನ್ನಲ್ಲೇ ಶಾಕ್ ಕೊಟ್ಟ ಇರಾನ್

ಜನಪ್ರತಿನಿಧಿ (ಟೆಹರಾನ್) : ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು, ಇದರ ಬೆನ್ನಲ್ಲೇ ಇರಾನ್ ಇದೀಗ ಉಲ್ಟಾ ಹೊಡೆದಿದೆ. ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿರುವ ಇರಾನ್, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ. ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಘೋಷಿಸಿದ್ದರು.

ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.

https://x.com/araghchi/status/1937311435882922420

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!