spot_img
Wednesday, May 13, 2026
spot_img

ಸ.ಕಿ.ಪ್ರಾ.ಶಾಲೆ ತೆಂಕೊಡಿಗೆ ನೂತನ ಕೊಠಡಿ ಉದ್ಘಾಟನೆ

 


ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತೆಂಕೊಡಿಗೆ ಇಲ್ಲಿ ನೂತನ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಅ.24ರಂದು ನಡೆಯಿತು. ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೂತನ ಕೊಠಡಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಉದಯ ಜಿ.ಪೂಜಾರಿ, ಎಂ.ಎಸ್ ಮಂಜ ಚಾರಿಟೆಬಲ್ ಟ್ರಸ್ಟ್ ಚಿತ್ತೂರು ಇದರ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ, ವೇ.ಮೂ.ದಿನಕರ ಉಡುಪ ಹರವರಿ, ವೆಂಕಟೇಶ ಶೆಟ್ಟಿ ತೆಂಕೊಡಿಗೆ, ಶಿಕ್ಷಣ ಸಂಯೋಜಕ ನಿತ್ಯಾನಂದ ಶೆಟ್ಟಿ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ ಗಾಣಿಗ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಘವೇಂದ್ರ ಗಾಣಿಗ, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ವೆ ದಿ|ಆನಂದ ಶೆಟ್ಟಿ ಕಟ್ಟೆಮನೆ ವಂಡ್ಸೆ ಇವರ ಸ್ಮರಣಾರ್ಥ ನೂತನ ಕೊಠಡಿ ನಿರ್ಮಾಣಕ್ಕೆ ಧನ ಸಹಾಯ ಮಾಡಿದ ಸುಗಂಧಿ ಶೆಟ್ಟಿ ಅವರನ್ನು ಶಾಸಕರು ಸನ್ಮಾನಿಸಿದರು. ದಾನಿಗಳಾದ ಸಿಂಗಾರಿ ಶೆಟ್ಟಿ, ವರ್ಗಾವಣೆಗೊಂಡ ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಹಶಿಕ್ಷಕ ಉದಯ ಸ್ವಾಗತಿಸಿ, ಜ್ಯೋತಿ ಶೆಟ್ಟಿ ವಂದಿಸಿದರು. ವೀರೇಂದ್ರ ಜೋಗಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!