spot_img
Monday, March 16, 2026
spot_img

ಕೋಟೇಶ್ವರದಲ್ಲಿ ‘ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪ’ ಉದ್ಘಾಟನೆ | ಸರಕಾರಿ ಶಾಲೆಗಳ ಅಭ್ಯುದಯಕ್ಕೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ-ಸಚಿವ ರಾಮಲಿಂಗ ರೆಡ್ಡಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಸರಕಾರಿ ಶಾಲೆಗಳಿಗೆ ಸಾರ್ವಜನಿಕ ಸಹಭಾಗಿತ್ವ ದೊರೆತಾಗ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸಂಸ್ಥೆ ಬೆಳವಣಿಗೆ ಹೊಂದುತ್ತದೆ. ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು. ದಾನಿಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. ಗೋಪಾಡಿ ಶ್ರೀನಿವಾಸ ರಾಯರ ಈ ಕೊಡುಗೆ ಮಾದರಿಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಹೇಳಿದರು.
ಅವರು ಮಂಗಳವಾರ ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್, ಗೋಪಾಡಿ. ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ಪ್ರಾಥಮಿಕ ವಿಭಾಗ-ಶತಮಾನೋತ್ಸವ ಸಮಿತಿ ವತಿಯಿಂದ ನಿರ್ಮಾಣಗೊಂಡ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂಟಪ ಉದ್ಘಾಟಿಸಿ ಮಾತನಾಡಿದರು.
ಪೋಷಕರ ಆಂಗ್ಲಭಾಷಾ ವ್ಯಾಮೋಹದಿಂದ ಇವತ್ತು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ. ನನ್ನ ಕ್ಷೇತ್ರದಲ್ಲಿ ೨೩ ಸರಕಾರಿ ಶಾಲೆಗಳಿದ್ದು ಅವುಗಳನ್ನೆಲ್ಲ ದತ್ತು ಸ್ವೀಕರಿಸಿ ವಿವಿಧ ದಾನಿಗಳು, ಸಿ.ಎಸ್.ಆರ್ ಅನುದಾನದ ಮೂಲಕ ಮೂಲಸೌಕರ್ಯದಿಂದ ಆರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸಾವಿರಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗಳಲ್ಲಿ ಕ್ಲಿನಿಕ್ ವ್ಯವಸ್ಥೆಯನ್ನು ಮಾಡಿದ್ದೇನೆ. ಸರಕಾರದ ಜೊತೆಯಲ್ಲಿ ವಿದ್ಯಾಭಿಮಾನಿಗಳು ಹೆಗಲುಕೊಟ್ಟಾಗ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಚೆನ್ನಾಗಿ ಮೂಡಿ ಬರಲು ಸಾಧ್ಯ, ಪೋಷಕರ ವಿಶ್ವಾಸ ಗಳಿಸಲು ಸಾಧ್ಯವಿದೆ. ಸರಕಾರಿ ಶಾಲೆಗಳಲ್ಲಿನ ಕೊರತೆಯನ್ನು ಪೂರೈಸುವ ಕೆಲಸ ಆಗಬೇಕು ಎಂದು ಅವರು ಅಭಿಪ್ರಾಯ ಪಟ್ಟರು.
ದೀಪ ಪ್ರಜ್ವಲಿಸಿ, ಆಶೀರ್ವಚನ ನೀಡಿದ ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ದೇವಾಲಯ ಮತ್ತು ವಿದ್ಯಾಲಯ ಒಂದು ಊರಿನಲ್ಲಿ ಸುಸ್ಥಿತಿಯಲ್ಲಿದ್ದರೆ ಆ ಊರು ಸಂಪದ್ಭರಿತವಾಗಿದೆ ಎಂದರ್ಥ. ಶಿಕ್ಷಣ ಸಂಸ್ಥೆಗಳು ಪ್ರತಿ ಊರಿನಲ್ಲಿಯೂ ಉತ್ತಮ ಸ್ಥಿತಿಯಲ್ಲಿರಬೇಕು. ಅಲ್ಲಿ ಸಂಸ್ಕಾರಯುತವಾದ ಶಿಕ್ಷಣ ದೊರೆಯಬೇಕು. ಶಿಕ್ಷಣ ಸಂಸ್ಥೆಗಳ ಅವಶ್ಯಕತೆಗಳನ್ನು ಅರಿತು ಒದಗಿಸುವ ಶ್ರೀನಿವಾಸ ರಾಯರಂಥಹ ವಿದ್ಯಾಭಿಮಾನಿಗಳು ಬೇಕು. ವ್ಯಕ್ತಿಯೋರ್ವ ಬದುಕಿನಲ್ಲಿ ಔನತ್ಯ ಸಾಧಿಸಿದಾಗ ಮಾತೃಭೂಮಿಗೆ ನೀಡುವ ಕೊಡುಗೆ ಬಹಳ ಮುಖ್ಯವಾದುದು. ಅತ್ಯಂತ ಕಡಿಮೆ ಅವಧಿಯಲ್ಲಿ ಈ ರಂಗಮಂಟಪ ನಿರ್ಮಾಣವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾದ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಉದ್ಯಮಿ ಗೋಪಾಡಿ ಶ್ರೀನಿವಾಸ ರಾಯರ ಕೊಡುಗೆ ಮಹತ್ತರವಾದುದು. ಶಿಕ್ಷಣ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಅವರು ವಿಶೇಷವಾದ ಕೊಡುಗೆ ನೀಡುತ್ತಿದ್ದಾರೆ. ಈ ವಿದ್ಯಾಸಂಸ್ಥೆಗೆ ಅತ್ಯವಶ್ಯವಾದ ಕೊಡುಗೆ ನೀಡಿದ್ದಾರೆ. ಕೋಟೇಶ್ವರ ಕೆಪಿ‌ಎಸ್ ಇವತ್ತು ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿ, ಪ್ರಾಥಮಿಕ ವಿಭಾಗದಲ್ಲಿಯೇ ೫೦೦ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದೆ ಎಂದರು.
ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಸಂಸ್ಥಾಪಕರಾದ ಗೋಪಾಡಿ ಶ್ರೀನಿವಾಸ ರಾವ್ ಮಾತುಗಳನ್ನಾಡಿ, ನಾವು ನೀಡುವ ಕಾಣಿಕೆ ಶಾಶ್ವತವಾಗಿ ಇರಬೇಕು, ಗುಣಮಟ್ಟವನ್ನು ಹೊಂದಿರಬೇಕು ಎನ್ನುವ ನಿಲುವು ನಮ್ಮದು. ಈ ರಂಗಮಂಟಪವನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದೆ. ಸುವ್ಯವಸ್ಥಿತ ಪ್ರತ್ಯೇಕ ಗ್ರೀನ್ ರೂಮ್, ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ವಿಶಾಲವಾದ ವೇದಿಕೆ, ಅತ್ಯಾಧುನಿಕವಾಗಿ ವಿನ್ಯಾಸ ಮಾಡಲಾಗಿದೆ. ಇದರ ನಿರ್ವಹಣೆಯನ್ನು ಕೂಡಾ ಟ್ರಸ್ಟ್ ನಿರ್ವಹಿಸಲಿದೆ ಎಂದರು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ವತಿಯಿಂದ ಗೋಪಾಡಿ ಶ್ರೀನಿವಾಸ ರಾವ್ ದಂಪತಿಗಳನ್ನು ಸನ್ಮಾನಿಸಲಾಯಿತು. ಸಚಿವ ರಾಮಲಿಂಗ ರೆಡ್ಡಿಯವರನ್ನು ಗೌರವಿಸಲಾಯಿತು. ಶ್ರೀನಿವಾಸ ರಾವ್ ದಂಪತಿಗಳು ಸ್ವಾಮಿಜೀಗಳನ್ನು ಗೌರವಿಸಿದರು. ರಂಗ ಮಂಟಪ ನಿರ್ಮಾಣದಲ್ಲಿ ಶ್ರಮಿಸಿದ ಜಗದೀಶ ಮಾರ್ಕೋಡು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಂಸದ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯಚಂದ್ರ ಜೈನ್, ಪ್ರಸಾದ್ ರಾಜ್ ಕಾಂಚನ್, ಮಲ್ಯಾಡಿ ಶಿವರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ದಿನೇಶ ಹೆಗ್ಡೆ ಮೊಳಹಳ್ಳಿ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಡಯಟ್‌ನ ಉಪನ್ಯಾಸಕ ಅಶೋಕ್ ಕಾಮತ್, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಅಧ್ಯಕ್ಷರಾದ ರುಕ್ಮಿಣಿ ಜಿ., ಕೆಪಿ‌ಎಸ್ ಕೋಟೇಶ್ವರದ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀಧರ ವಿಠಲ ಕಾಮತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ ಉಡುಪ, ಗ್ರಾಮ ಪಂಚಾಯತ್ ಸದಸ್ಯ ನಾಗರಾಜ, ರಫೀಕ್ ಬ್ಯಾರಿ ಕೋಟೇಶ್ವರ, ಡಾ.ಭಾಸ್ಕರ ಆಚಾರ್ಯ, ಮುಖ್ಯ ಶಿಕ್ಷಕ ಚಂದ್ರ ನಾಯ್ಕ್, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.
ಮಹಿಮ ಸಾಮಗ ಪ್ರಾರ್ಥನೆ ಮಾಡಿದರು. ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಕಾರ್ಯದರ್ಶಿ ಅಮೃತ್ ಕುಮಾರ್ ತೌಳ ಸ್ವಾಗತಿಸಿದರು. ಶತಮಾನೋತ್ಸವ ಸಮಿತಿಯ ರಾಜಗೋಪಾಲ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಹಾಸ್ ಉಪಾಧ್ಯ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ನೂತನ ರಂಗಮಂಟಪದಲ್ಲಿ ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಭಜನೆ, ನೃತ್ಯ ವಸಂತ ನಾಟ್ಯಾಲಯದ ಸದಸ್ಯರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!