spot_img
Monday, March 16, 2026
spot_img

ಕೆ.ಎಸ್.ಆರ್.ಟಿ.ಸಿಗೆ 800 ಬಸ್ಸು-ಸಚಿವ ರಾಮಲಿಂಗ ರೆಡ್ಡಿ

ಕುಂದಾಪುರ: ಕೆ.ಎಸ್.ಆರ್.ಟಿ.ಸಿ ಈಗ ರಾಜ್ಯದಲ್ಲಿ ಎರಡು ಸಾವಿರ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಮಂಗಳೂರು ವಿಭಾಗಕ್ಕೆ ಸುಮಾರು 340 ಚಾಲಕರನ್ನು ನೀಡಲಾಗಿದೆ. ಉಡುಪಿಗೆ 200ಕ್ಕೂ ಮಿಕ್ಕಿ ಚಾಲಕರನ್ನು ಒದಗಿಸಲಾಗಿದೆ. ಅವರು ಯುಪಿ‌ಎ ಸರಕಾರದ ಅವಧಿಯಲ್ಲಿ ನಗರ ಪ್ರದೇಶಗಳಿಗೆ ನರ್ಮ್ ಯೋಜನೆಯಡಿ ಬಸ್ ನೀಡುತ್ತಿದ್ದರು. ಸರಕಾರ ಬದಲಾದ ಮೇಲೆ ಯೋಜನೆ ಬದಲಾಗಿದೆ. ಈ ಬಾರಿ 700-800 ಬಸ್ಸುಗಳನ್ನು ಕೆ.ಎಸ್,ಆರ್.ಟಿ.ಸಿಗೆ ನೀಡಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.

ಅವರು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಕೋಟೇಶ್ವರ ಸೇವಾ ಟ್ರಸ್ಟ್ ಉದ್ಘಾಟನಾ ಕಾರ್ಯಕ್ರಮದಲಿ ಭಾಗಿಯಾಗಿ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು, ಕೊಲ್ಲೂರು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬರುತ್ತಿದ್ದು ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯ ಇರಲೇಬೇಕು. ಈ ಬಗ್ಗೆ ಚರ್ಚೆ ಮಾಡಿ ಏನೇನು ನ್ಯೂನತೆ ಇದೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಹೆಚ್ಚು ಭಕ್ತರು ಬರುವ ದೇವಸ್ಥಾನಗಳಿಗೆ ಪ್ರಾಧಿಕಾರ ರಚನೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕೆ ಅತಿ ಹೆಚ್ಚು ಭಕ್ತರು ಜನರು ಬರುವ ಪ್ರದೇಶ. ಹಾಗಾಗಿ ಈ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಒಂದು ದೇವಸ್ಥಾನದ ಹಣವನ್ನು ಇನ್ನೊಂದು ದೇವಸ್ಥಾನಕ್ಕೆ ನೀಡುವ ಅಧಿಕಾರ ಯಾರಿಗೂ ಇಲ್ಲ ಎಂದರು.

ರಾಜ್ಯದಲ್ಲಿ ನಾಲ್ಕುವರೆ ಲಕ್ಷ ಕೋಟಿ ರೂ. ಜಿ‌ಎಸ್‌ಟಿ ಸಂಗ್ರವಾಗುತ್ತಿದ್ದು, ಅದರಲ್ಲಿ 50 ಸಾವಿರ ಕೋಟಿ ರೂ. ಮಾತ್ರ ರಾಜ್ಯಕ್ಕೆ ನೀಡಲಾಗುತ್ತಿದೆ. ಸಂಗ್ರಹವಾದ ದುಡ್ಡಿನಲ್ಲಿ ಅರ್ಧದಷ್ಟು ನೀಡಿದರೆ ಯಾವ ಸಮಸ್ಯೆಯೂ ಇರುತ್ತಿರಲಿಲ್ಲ. ಕೇಂದ್ರ ಸರಕಾರಕ್ಕೆ ಕಣ್ಣು, ಕಿವಿ ಇದ್ದರೆ ಮಾತ್ರ ನಾವು ಹೇಳಿದದ್ದು ಕೇಳಿಸುತ್ತಿತ್ತು ಎಂದು ಸುದ್ಧಿಗಾರರ ಪ್ರಶ್ನೆಗೆ ಉತ್ತರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!