spot_img
Monday, March 16, 2026
spot_img

ಮಂದಾರ್ತಿ ಸೇವಾ ಸಹಕಾರ ಸಂಘದ ವತಿಯಿಂದ ವನ ಮಹೋತ್ಸವ 

ಮಂದಾರ್ತಿ: ಮಂದಾರ್ತಿ ಅಂತರಾಷ್ಟ್ರೀಯ ಸಹಕಾರ ವರ್ಷ 2025 ಸಲುವಾಗಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಮಂದಾರ್ತಿ ಸೇವಾ ಸಹಕಾರ ಸಂಘ ನಿ ಮಂದಾರ್ತಿ, ಇವರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಮಂದಾರ್ತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜರಗಿದ ವನಮಹೋತ್ಸವ ಕಾರ್ಯಕ್ರಮವನ್ನು, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಮುಖ್ಯೋಪಾದ್ಯಯರಾದ ಆದ ನಾರಾಯಣ ರವರು ಸಸಿ ನಡುವ ಮೂಲಕ ಚಾಲನೆ ನೀಡಿದರು.
ಮಂದಾರ್ತಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಹೆಚ್ ಗಂಗಾಧರ ಶೆಟ್ಟಿಯವರು ಮಾತಾನಾಡಿ ಕೇಂದ್ರ ಸರಕಾರದ ಈ ಮಹತ್ತರ ಯೋಜನೆಯೂ ದೇಶದ ಪ್ರತಿಯೊಬ್ಬ ಪ್ರಜೆ ಆಚರಣೆ ಮಾಡುವಂತಾಗಲಿ, ತಾಯಿಯ ನನಪಲ್ಲಿ ಒಂದು ಗಿಡ ಎಂಬ ಅಭಿಯಾನದಡಿ ಗಿಡ ನೆಟ್ಟು ಅದರ ಪಾಲನೆ ಪೋಷಣೆ ಮಾಡಿ ಉತ್ತಮ ಪರಿಸರ ನಿರ್ಮಾಣ ಮಾಡುವಂತಾಗಲಿ ಎಂದು ಎಲ್ಲರಿಗೂ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರೌಢ ಶಾಲಾ ಅಧ್ಯಾಪಕ ವೃಂದದವರು, ಸೇವಾ ಸಹಕಾರ ಸಂಘದ ನಿರ್ದೇಶಕರಾದ ದಿನೇಶ ಕುಮಾರ ಮತ್ತು ಸಿಬ್ಬಂದಿ ವರ್ಗ ಶಾಲಾ ವಿದ್ಯಾರ್ಥಿಗಳು ಊರವರು ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!